ADVERTISEMENT

ಶತಾವಧಾನಿ ಆರ್. ಗಣೇಶಗೆ ‘ಕೆರೆಮನೆ ಶಿವರಾಮ ಹೆಗಡೆ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 29 ಜನವರಿ 2024, 20:30 IST
Last Updated 29 ಜನವರಿ 2024, 20:30 IST
ಆರ್. ಗಣೇಶ
ಆರ್. ಗಣೇಶ   

ಹೊನ್ನಾವರ (ಉತ್ತರ ಕನ್ನಡ ಜಿಲ್ಲೆ): ‘ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ನೀಡುವ ಕೆರೆಮನೆ ಶಿವರಾಮ ಹೆಗಡೆ ಪ್ರಶಸ್ತಿಗೆ ಶತಾವಧಾನಿ ಆರ್. ಗಣೇಶ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹25 ಸಾವಿರ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ’ ಎಂದು ಮಂಡಳಿಯ ನಿರ್ದೇಶಕ ಕೆರೆಮನೆ ಶಿವಾನಂದ ಹೆಗಡೆ ತಿಳಿಸಿದ್ದಾರೆ.

ಕೆರೆಮನೆ ಗಜಾನನ ಹೆಗಡೆ ಪ್ರಶಸ್ತಿಗೆ ಚಿಂತಕ ಮತ್ತು ಯಕ್ಷಗಾನ ತಾಳಮದ್ದಲೆ ಅರ್ಥಧಾರಿ ಲಕ್ಷ್ಮಿರಾಯಣ ಸಾಮಗ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹15 ಸಾವಿರ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ.

‘ಗುಣವಂತೆಯ ಯಕ್ಷಾಂಗಣದಲ್ಲಿ ಮಾರ್ಚ್ 16ರಿಂದ 20ರವರೆಗೆ ನಡೆಯುವ ‘ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ’ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಅವರು ತಿಳಿಸಿದ್ದಾರೆ.

ADVERTISEMENT
ಲಕ್ಷ್ಮಿನಾರಾಯಣ ಸಾಮಗ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.