‘ಮಂಗನ ಕಾಯಿಲೆ’
ಶಿರಸಿ: ತಾಲ್ಲೂಕಿನ ಬಲವಳ್ಳಿ ಭಾಗದ 51 ವರ್ಷದ ವ್ಯಕ್ತಿಯೊಬ್ಬರು ಮಂಗನ ಕಾಯಿಲೆಯಿಂದ (ಕೆಎಫ್‌ಡಿ) ಬಳಲುತ್ತಿರುವುದು ಮಂಗಳವಾರ ದೃಢಪಟ್ಟಿದೆ.
‘ಫೆಬ್ರುವರಿ 20ರಂದು ವ್ಯಕ್ತಿಗೆ ಜ್ವರ, ಮೈಕೈ ನೋವು ಮತ್ತು ತಲೆನೋವು ಕಾಣಿಸಿಕೊಂಡಿತ್ತು. ಸ್ಥಳೀಯ ರೇವಣಕಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಮಾಡಿದ ಬಳಿಕ, ಅವರ ರಕ್ತದ ಮಾದರಿಯನ್ನು ಶಿವಮೊಗ್ಗದ ಸಂಶೋಧನಾ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಮಂಗನ ಕಾಯಿಲೆ ದೃಢಪಟ್ಟಿದೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ’ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ವಿನಾಯಕ ಕಣ್ಣಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.