
ಹೊನ್ನಾವರ: ಮಂಗನ ಕಾಯಿಲೆ (ಕೆ.ಎಫ್.ಡಿ.) ಬರದಂತೆ ಮುಂಜಾಗ್ರತೆ ತೆಗೆದುಕೊಳ್ಳುವ ಕುರಿತು ಜನರಲ್ಲಿ ಅಗತ್ಯ ಜಾಗೃತಿ ಮೂಡಿಸುವ ಜೊತೆಗೆ ರೋಗ ಉಲ್ಬಣಿಸದಂತೆ ಆರೋಗ್ಯ ಕಾರ್ಯಕರ್ತರು ವೈದ್ಯಕೀಯ ಕ್ರಮ ಜರುಗಿಸಬೇಕು' ಎಂದು ತಹಶೀಲ್ದಾರ್ ಪ್ರವೀಣ ಕರಾಂಡೆ ಸೂಚಿಸಿದರು.
ಇಲ್ಲಿ ಶುಕ್ರವಾರ ನಡೆದ 'ಕೆ.ಎಫ್.ಡಿ. ಟಾಸ್ಕ್ ಫೋರ್ಸ್' ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆರೋಗ್ಯಾಧಿಕಾರಿ ಡಾ.ವೈಶಾಲಿ ನಾಯ್ಕ ಮಾತನಾಡಿ, ಸಾಲ್ಕೋಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಬ್ಬ ವ್ಯಕ್ತಿಯಲ್ಲಿ ಮಂಗನ ಕಾಯಿಲೆ ಸೋಂಕು ಪತ್ತೆಯಾಗಿದೆ. ಮಂಗನ ಕಾಯಿಲೆಗೆ ನಿರ್ದಿಷ್ಟ ಔಷಧ ಇಲ್ಲ. ಕಾಯಿಲೆ ಬರದಂತೆ ಜನರು ಮುಂಜಾಗ್ರತೆ ವಹಿಸಬೇಕಿದ್ದು ಆರೋಗ್ಯ ಇಲಾಖೆಯಿಂದ ನೀಡಲಾದ ಮಾರ್ಗದರ್ಶನ ಪಾಲಿಸಬೇಕು. ಜ್ವರ ಮತ್ತಿತರ ಲಕ್ಷಣ ಕಂಡು ಬಂದರೆ ವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆಯಬೇಕು. ಸತ್ತ ಮಂಗಗಳು ರೋಗ ಹರಡುವ ಮುನ್ಸೂಚನೆಯಾಗಿದ್ದು ಇಂಥ ಘಟನೆ ಕಂಡು ಬಂದರೆ ಆರೋಗ್ಯ ಇಲಾಖೆಗೆ ತಿಳಿಸಬೇಕು' ಎಂದು ಹೇಳಿದರು.
ಸಮಿತಿಯ ಸದಸ್ಯರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.