ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ) ಹಂಚಿಕೆಯಾಗಿ ಉಳಿದಿರುವ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್‌ನ ಭಾಗವಾಗಿರುವ ಅನಸ್ತೇಶಿಯಾ ಹಾಗೂ ಶಸ್ತ್ರಚಿಕಿತ್ಸೆ ತಂತ್ರಜ್ಞಾನ, ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞಾನ ವಿಷಯಗಳ ಬಿಎಸ್‌ಸಿ ಪದವಿಗೆ ಇಲ್ಲಿನ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಕ್ರಿಮ್ಸ್) 2025–26ನೇ ಸಾಲಿನಲ್ಲಿ ತಲಾ 30 ಸೀಟುಗಳ ಭರ್ತಿಗೆ ಆಫ್‌ಲೈನ್ ಪ್ರವೇಶಾತಿ ಪ್ರಕ್ರಿಯೆ ಜ.6ರಂದು ನಡೆಯಲಿದೆ.
ಅಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಕ್ರಿಮ್ಸ್‌ನ ಬೋಧನಾ ಕೊಠಡಿ–2ರಲ್ಲಿ ಪ್ರವೇಶಾತಿ ಪ್ರಕ್ರಿಯೆ ನಡೆಯಲಿದೆ. ಕೆಇಎಯಲ್ಲಿ ನೋಂದಾಯಿತ ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುವುದು. ಅಗತ್ಯ ಮಾಹಿತಿಗೆ https://krimskarwar.karnataka.gov.in ವೆಬ್‌ಸೈಟ್ ಗಮನಿಸಬಹುದು ಎಂದು ಕ್ರಿಮ್ಸ್ ನಿರ್ದೇಶಕಿ ಡಾ.ಪೂರ್ಣಿಮಾ ಆರ್.ಟಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.