ಕುಮಟಾ (ಉತ್ತರ ಕನ್ನಡ): ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರ ಹೋಟೆಲ್ ಪಾಂಡುರಂಗ ಬಳಿ ಶನಿವಾರ ಬೃಹತ್ ಟ್ರಕ್ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಐವರಿಗೆ ಗಂಭೀರವಾಗಿ ಗಾಯಗಳಾಗಿವೆ. 19 ಮಂದಿ ಗಾಯಗೊಂಡಿದ್ದಾರೆ.
ಗಂಭೀರ ಗಾಯಗೊಂಡವರನ್ನು ಉಡುಪಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಉಳಿದ ಗಾಯಾಳುಗಳು ಕುಮಟಾ ಮತ್ತು ಹೊನ್ನಾವರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟ್ರಕ್‌ನಲ್ಲಿ ಕಬ್ಬಿಣದ ಭಾರಿ ಗಾತ್ರದ ಕಂಬಗಳನ್ನು ಸಾಗಿಸಲಾಗುತ್ತಿತ್ತು. ಆ ಕಂಬಗಳು ಬಸ್ ಚಾಲಕ ಬದಿಗೆ ಗುದ್ದಿದ ಪರಿಣಾಮ ಬಸ್‌ನ ಒಂದು ಭಾಗ ಸಂಪೂರ್ಣ ಕಿತ್ತುಹೋಗಿದೆ. ಬಸ್‌ನ ಬಲಭಾಗದ ಸೀಟಿನಲ್ಲಿ ಕುಳಿದ್ದವರಿಗೂ ಕಂಬಗಳು ಅಪ್ಪಳಿಸಿದ್ದರಿಂದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ ಕುಮಟಾದಿಂದ ಗೋಕರ್ಣಕ್ಕೆ ತೆರಳುತ್ತಿತ್ತು.
ಗಾಯಾಳುಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಕುಮಟಾ ಪೊಲೀಸರು ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.