ADVERTISEMENT

ಕಾರ್ಮಿಕ ಅದಲಾತ್: ಪರಿಹಾರ ಧನ ಸಿಗದ ದೂರುಗಳೇ ಹೆಚ್ಚು

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2021, 13:49 IST
Last Updated 3 ಸೆಪ್ಟೆಂಬರ್ 2021, 13:49 IST
ಶಿರಸಿಯಲ್ಲಿ ಶುಕ್ರವಾರ ನಡೆದ ಕಾರ್ಮಿಕ ಅದಾಲತ್‍ನಲ್ಲಿ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕಾರ್ಮಿಕರ ಅಹವಾಲು ಸ್ವೀಕರಿಸಿದರು
ಶಿರಸಿಯಲ್ಲಿ ಶುಕ್ರವಾರ ನಡೆದ ಕಾರ್ಮಿಕ ಅದಾಲತ್‍ನಲ್ಲಿ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕಾರ್ಮಿಕರ ಅಹವಾಲು ಸ್ವೀಕರಿಸಿದರು   

ಶಿರಸಿ: ಕಾರ್ಮಿಕರ ಸಮಸ್ಯೆ ಆಲಿಸಿ ಅದಕ್ಕೆ ಪರಿಹಾರ ನೀಡುವ ನಿಟ್ಟಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಮಿಕ ಅದಲಾತ್‍ನಲ್ಲಿ ಕೋವಿಡ್ ಸಂಕಷ್ಟದ ವೇಳೆ ಘೋಷಿಸಿದ್ದ ₹3 ಸಾವಿರ ಪರಿಹಾರಧನ ಲಭಿಸದ ಬಗ್ಗೆ ಹೆಚ್ಚು ದೂರುಗಳು ಸಲ್ಲಿಕೆಯಾದವು.

ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಅದಲಾತ್‍ನಲ್ಲಿ ನಲವತ್ತಕ್ಕೂ ಹೆಚ್ಚು ದೂರುಗಳು ಸಲ್ಲಿಕೆಯಾಗಿದ್ದವು. ಈ ಪೈಕಿ ಪರಿಹಾರಧನ ಸಿಗದ ಕುರಿತು ಶೇ 90ರಷ್ಟು ದೂರುಗಳಿದ್ದವು. ದೂರು ಸ್ವೀಕರಿಸಿದ ಅಧಿಕಾರಿಗಳು ಸೆ.16ರ ಒಳಗೆ ಇತ್ಯರ್ಥಪಡಿಸುವುದಾಗಿ ಕಾರ್ಮಿಕರಿಗೆ ಭರವಸೆ ನೀಡಿದರು.

ಅದಾಲತ್‍ಗೆ ಚಾಲನೆ ನೀಡಿದ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ,‘ಕೋವಿಡ್ ಸಂಕಷ್ಟದ ನಡುವೆ ಕಾರ್ಮಿಕರಿಗೆ ನೆರವು ನೀಡುವಲ್ಲಿ ರಾಜ್ಯ ಸರ್ಕಾರ ಹಿಂದೆ ಬಿದ್ದಿಲ್ಲ.ಅದಾಲತ್ ನಡೆಸಿ ಸಮಸ್ಯೆಗೆ ತ್ವರಿತ ಪರಿಹಾರ ಒದಗಿಸುವುದು ಮಾದರಿ ಕಾರ್ಯ’ ಎಂದರು.

ADVERTISEMENT

‘ಕಾರ್ಮಿಕರು ಆರೋಗ್ಯ ಕಾಳಜಿಗೆ ಗಮನಕೊಡಬೇಕು. ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಬೇಕು. ಇದಕ್ಕೆ ಸರ್ಕಾರ ನೀಡುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ತಹಶೀಲ್ದಾರ್ ಎಂ.ಆರ್.ಕುಲಕರ್ಣಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ನಂದನ ಸಾಗರ, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಕಾರ್ಮಿಕ ಅಧಿಕಾರಿ ಅಕ್ಬರ್ ಮುಲ್ಲಾ, ನಿರೀಕ್ಷಕ ನವೀನಕುಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.