ADVERTISEMENT

ಅಣಶಿ ಘಟ್ಟದಲ್ಲಿ ಗುಡ್ಡ ಕುಸಿತ: ವಾಹನ ಸಂಚಾರ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 11 ಜುಲೈ 2022, 8:40 IST
Last Updated 11 ಜುಲೈ 2022, 8:40 IST
   

ಜೊಯಿಡಾ: ಸದಾಶಿವಗಡ–ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ಅಣಶಿ ಘಟ್ಟದಲ್ಲಿ ಎರಡು ಕಡೆಗಳಲ್ಲಿ ಇಂದು ಬೆಳಗ್ಗೆ ಗುಡ್ಡ ಕುಸಿದಿದ್ದು ತಾತ್ಕಾಲಿಕವಾಗಿ ವಾಹನ ಸಂಚಾರ ಸ್ಥಗಿತಗೊಂಡಿದೆ.

ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗುಡ್ಡ ಕುಸಿತ ಕಂಡಿದೆ. ಕಾರವಾರದಿಂದ ಜೊಯಿಡಾ ಮೂಲಕ ದಾಂಡೇಲಿ,ಬೆಳಗಾವಿ, ಧಾರವಾಡಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿ ಇದಾಗಿದ್ದು ಕಳೆದ ವರ್ಷ ಅಪಾರ ಪ್ರಮಾಣದಲ್ಲಿ ಇಲ್ಲಿ ಗುಡ್ಡ ಕುಸಿದು ಸುಮಾರು ಒಂದೂವರೆ ತಿಂಗಳು ಈ ಮಾರ್ಗದಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.

ಒಂದು ವಾರದ ಹಿಂದೆಯೂ ಇಲ್ಲಿ ದೊಡ್ಡ ಗಾತ್ರದ ಕಲ್ಲುಗಳು ರಸ್ತೆಯಲ್ಲಿ ಬಿದ್ದಿದ್ದು ಸಾರ್ವಜನಿಕರು ಅದನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಿಸಿದ್ದರು.

ADVERTISEMENT

ಜೊಯಿಡಾ ತಾಲ್ಲೂಕಿನ ಬಾಪೇಲಿಯಲ್ಲಿ ಪೊಲೀಸ್ ಚೆಕ್ ಪೋಸ್ಟ್ ಹಾಕಲಾಗಿದ್ದು ಕಾರವಾರಕ್ಕೆ ಹೋಗುವ ವಾಹನಗಳಿಗೆ ಯಲ್ಲಾಪುರ ಮಾರ್ಗದ ಮೂಲಕ ಸಂಚರಿಸಲು ಸೂಚಿಸಲಾಗುತ್ತಿದೆ.

ರಸ್ತೆಯನ್ನು ತೆರವು ಗೊಳಿಸುವ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.