ADVERTISEMENT

ಅರಬೈಲ್‌ ಘಟ್ಟದಲ್ಲಿ ಗುಡ್ಡ ಕುಸಿತ: ಸಂಚಾರ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 22 ಜುಲೈ 2021, 16:42 IST
Last Updated 22 ಜುಲೈ 2021, 16:42 IST
ರಾಷ್ಟ್ರೀಯ ಹೆದ್ದಾರಿ 63ರ ಮೇಲೆ ಕುಸಿದ ಗುಡ್ಡದ ಮಣ್ಣು.
ರಾಷ್ಟ್ರೀಯ ಹೆದ್ದಾರಿ 63ರ ಮೇಲೆ ಕುಸಿದ ಗುಡ್ಡದ ಮಣ್ಣು.   

‌ಯಲ್ಲಾಪುರ: ತಾಲ್ಲೂಕಿನ ಅರಬೈಲ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 63ರ ಮೇಲೆ ಗುಡ್ಡದ ಮಣ್ಣು ಕುಸಿದಿದೆ. ಅಪಾರ ಪ್ರಮಾಣದಲ್ಲಿ ಮಣ್ಣು ರಸ್ತೆಯಲ್ಲಿ ಬಿದ್ದಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಇದರಿಂದ ಯಲ್ಲಾಪುರ– ಅಂಕೋಲಾ ನಡುವೆ ಹೆದ್ದಾರಿ ಮೂಲಕ ಸಂಪರ್ಕ ಕಡಿತವಾಗಿದೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ತೆರಳಿದ್ದು, ಮಣ್ಣು ತೆರವಿಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.