ಹೊನ್ನಾವರ: ಸರ್ಕಾರ ಮೂಲಭೂತ ಸೌಕರ್ಯಗಳನ್ನು ಒದಗಿಸಲು ನೀಡುವ ಆದ್ಯತೆಯನ್ನು ಮಾತೃಭಾಷೆಗೂ ನೀಡುವ ಅಗತ್ಯವಿದೆ' ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಶಿಲ್ಪಾ ಎಚ್.ಆರ್ ಅಭಿಪ್ರಾಯಪಟ್ಟರು.
ಇಲ್ಲಿಯ ಎಸ್.ಡಿ.ಎಂ. ಪದವಿ ಕಾಲೇಜಿನ ಕನ್ನಡ ಸಂಘ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕನ್ನಡ ಭಾಷೆಯ ಕುರಿತು ಅವರು ವಿಶೇಷ ಉಪನ್ಯಾಸ ನೀಡಿದರು.
'ಸಂವಹನದಿಂದ ಭಾಷೆ ಉಳಿಯುತ್ತದೆ. ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆ ಇಲ್ಲಿಯ ನೆಲದ ಸಂಸ್ಕೃತಿಯ ಪ್ರತೀಕವಾಗಿದೆ' ಎಂದು ಅವರು ಹೇಳಿದರು.
ಪ್ರಾಚಾರ್ಯ ಪ್ರೊ.ಸಂಜೀವ ನಾಯಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ವಿಭಾಗದ ಮುಖ್ಯಸ್ಥ ನಾಗರಾಜ ಹೆಗಡೆ ಅಪಗಾಲ, ವಿದ್ಯಾರ್ಥಿ ಪ್ರತಿನಿಧಿ ಶಿಲ್ಪಾ ಹಂಚಿನಾಳ ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಎನ್.ಎಂ.ಕೆ.ಆರ್.ವಿ. ಮಹಿಳಾ ಕಾಲೇಜು ಆಯೋಜಿಸಿದ್ದ ರಾಜ್ಯ ಮಟ್ಟದ ಕವನ ಸ್ಪರ್ಧೆಯಲ್ಲಿ ವಿಜೇತರಾದ ವಂದನಾ ಎಂ.ಅವರಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು.
ನಿಹಾರಿಕಾ ಭಟ್ಟ ಪ್ರಾರ್ಥನಾ ಗೀತೆ ಹಾಡಿದರು. ಮಾಧುರಿ ನಾಯ್ಕ ಸ್ವಾಗತಿಸಿದರು. ಪಲ್ಲವಿ ಮಡಿವಾಳ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.