ADVERTISEMENT

ಸಿದ್ದಾಪುರ: ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದು ಚಿರತೆ ಸಾವು

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2024, 13:44 IST
Last Updated 12 ಸೆಪ್ಟೆಂಬರ್ 2024, 13:44 IST
ಸಿದ್ದಾಪುರ ತಾಲ್ಲೂಕಿನ ಹೆನ್ನೂರು ಗ್ರಾಮದಲ್ಲಿ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದು ಮೃತ ಪಟ್ಟ ಚಿರತೆ.
ಸಿದ್ದಾಪುರ ತಾಲ್ಲೂಕಿನ ಹೆನ್ನೂರು ಗ್ರಾಮದಲ್ಲಿ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದು ಮೃತ ಪಟ್ಟ ಚಿರತೆ.   

ಸಿದ್ದಾಪುರ: ತಾಲ್ಲೂಕಿನ ಹೆನ್ನೂರು ಗ್ರಾಮದಲ್ಲಿ ಗುರುವಾರ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದು ಒಂದು ವರ್ಷದ ಹೆಣ್ಣು ಚಿರತೆ ಮೃತಪಟ್ಟಿದೆ.

ಗ್ರಾಮದ ಸ.ನಂ. 108 ರಲ್ಲಿದ್ದ ಬಾವಿಯಲ್ಲಿ ಬೆಳಗಿನ ಜಾವ ಚಿರತೆಯ ಮೃತ ದೇಹ ಪತ್ತೆಯಾಗಿದೆ. ಪಶುವೈದ್ಯಾಧಿಕಾರಿ ಡಾ. ಶ್ರೇಯಸ್‌ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿದರು. ಮೇಲ್ನೋಟಕ್ಕೆ ಆಕಸ್ಮಿಕ ಸಾವು ಎಂದು ತಿಳಿದುಬಂದಿದ್ದು ಹೆಚ್ಚಿನ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ.

ಘಟನಾ ಸ್ಥಳಕ್ಕೆ ಶಿರಸಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಜ್ಜಯ್ಯ ಜಿ. ಆರ್. ಜಾನ್ಮನೆ, ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಿ. ಎನ್. ಹರೀಶ್, ಜಾನ್ಮನೆ ವಲಯ ಅರಣ್ಯಾಧಿಕಾರಿ ಶಿವಾನಂದ್ ಎಸ್. ನಿಂಗಾಣಿ, ಹೇರೂರು ಶಾಖೆಯ ಉಪವಲಯ ಅರಣ್ಯಾಧಿಕಾರಿ ಮುತ್ತಣ್ಣ ಹಂದ್ರಾಳ ಭೇಟಿ ನೀಡಿ ಪರಿಶೀಲಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.