ADVERTISEMENT

ನುಡಿದಂತೆ ನಡೆದ ರಾಜ್ಯದ ಕಾಂಗ್ರೆಸ್‌ ಸರ್ಕಾರ: ಶಾಸಕ ಆರ್.ವಿ. ದೇಶಪಾಂಡೆ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2024, 13:35 IST
Last Updated 26 ಏಪ್ರಿಲ್ 2024, 13:35 IST
ಹಳಿಯಾಳ ತಾಲ್ಲೂಕಿನ ಹವಗಿಯಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯನ್ನು ಶಾಸಕ ಆರ್‌.ವಿ. ದೇಶಪಾಂಡೆ ಉದ್ಘಾಟಿಸಿದರು
ಹಳಿಯಾಳ ತಾಲ್ಲೂಕಿನ ಹವಗಿಯಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯನ್ನು ಶಾಸಕ ಆರ್‌.ವಿ. ದೇಶಪಾಂಡೆ ಉದ್ಘಾಟಿಸಿದರು   

ಹಳಿಯಾಳ: ರಾಜ್ಯದ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಕಾಂಗ್ರೆಸ್‌ ಗ್ಯಾರಂಟಿ ನೀಡಿದ್ದನ್ನು ಮಾಡಿಯೇ ತೀರುತ್ತೇವೆ ಎಂದು ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.

ಸಮೀಪದ ಹವಗಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಭರವಸೆಯನ್ನು ವಿಧಾನಸಭಾ ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಕೇವಲ 10 ತಿಂಗಳಲ್ಲಿ ಕಾಂಗ್ರೆಸ್ ಪೂರ್ಣಗೊಳಿಸಿದೆ. ಈಗಲೂ ಲೋಕಸಭಾ ಚುನಾವಣೆಯಲ್ಲಿ ನೀಡಿದಂತಹ ಗ್ಯಾರಂಟಿ ಯೋಜನೆಯನ್ನು ಇಂಡಿಯಾ ಘಟ ಬಂಧನ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪಂಚ ಜನ್ಯ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡುವುದು ಖಚಿತ ಎಂದರು.

ತಾಲ್ಲೂಕು, ರಾಜ್ಯ, ರಾಷ್ಟ್ರ ಅಭಿವೃದ್ಧಿ ಹೊಂದಲು ಮಹಿಳೆಯರ ಪಾತ್ರ ಬಹು ಪ್ರಾಮುಖ್ಯ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ 6 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ ಸ್ಪರ್ಧಿಸಲಿದೆ. ರಾಜ್ಯದ ಎಲ್ಲಾ 28 ಸ್ಥಾನಗಳು ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಲಿದೆ ಎಂದರು.

ADVERTISEMENT
ಹಳಿಯಾಶಳ ತಾಲ್ಲೀಕಿನ ಕಾಂಗರ್ಸ ಪಕ್ಷದ ಪ್ರಚಾರ ಸಭೆಯಲ್ಲಿ ಶಾಸಕ ಆರ್‌ ವಿ.ದೇಶಪಾಂಡೆ ಮಾತನಾಡಿದರು.ಪಕ್ಷದ ಲೋಕಸಭಾ ಅಭ್ಯರ್ಥಿ ಮತ್ತುರರಯ ಒಸಾಲ್ಗಗೊಮಎಎಗಗ

ಪಕ್ಷದ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಮಾತನಾಡಿ, 30 ವರ್ಷಗಳಿಂದ ಈ ಭಾಗದ ಸಂಸದರು ಲೋಕಸಭಾ ಅಭ್ಯರ್ಥಿಯಾಗಿ ಚುನಾಯಿತರಾಗುತ್ತಾ ಬಂದಿದ್ದಾರೆ. ಆದರೆ ಒಮ್ಮೆಯಾದರೂ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ ಎಂದು ಮತದಾರರು ತಿಳಿದುಕೊಳ್ಳಬೇಕು. 10 ವರ್ಷದ ಆಡಳಿತ ನೀಡಿದ ಮೋದಿ ಸರ್ಕಾರದ ಕಾರ್ಯ ವೈಖರಿ ಹಾಗೂ 10 ತಿಂಗಳು ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಮನೆ ಮನೆಗೆ ತಲುಪಿದೆ. ಬಿಜೆಪಿಯವರು ಕೇವಲ ಸುಳ್ಳು ಭರವಸೆಗಳು, ಶ್ರೀರಾಮನ ಹೆಸರಿನಲ್ಲಿ ರಾಜಕಾರಣ ಮಾಡುವ ಇವರು ಬಿಜೆಪಿಯನ್ನು ಧರ್ಮ ಮತ್ತು ಸಂಸ್ಕೃತಿಯಿಂದ ರಕ್ಷಣೆ ಮಾಡಬೇಕಾಗಿದೆ ಎಂದು ತಿಳಿಸಿದರು.

ಹಳಿಯಾಳ ತಾಲ್ಲೂಕಿನ ಹವಗಿ ಗ್ರಾಮದಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಡಾ.ಅಂಜಲಿ ನಿಂಬಳ್ಕರ ಮಾತನಾಡಿದರು. ಮುಖಂಡ ಬಿ.ಡಿ.ಚೌಗುಲೆ ಮತ್ತಿತರರು ಪಾಳ್ಗೊಂಡಿದ್ದರು

ಮುಖಂಡರಾದ ಉಮೇಶ್ ಬೋಳಶೇಟ್ಟಿ, ಸಂತೋಷ್ ರೇಣಕೆ ಮಾತನಾಡಿದರು. ಮುಖಂಡ ಬಿ.ಡಿ. ಚೌಗಲೆ, ಶಂಕರ ಬೆಳಗಾಂಕರ, ಸುಭಾಷ ಕೊರರ್ವೇಕರ, ಕೈತಾನ ಬಾರ್ಬೋಜಾ, ಅಜರ ಬಸರಿಕಟ್ಟಿ, ಅನಿಲ್ ಜೈನ, ಅಶೋಕ ಅಂಗ್ರೊಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.