ಕಾರವಾರ: ಲೋಕಸಭೆ ಚುನಾವಣೆಗೆ ಮೇ 7 ರಂದು ಮತದಾನ ನಡೆಯಲಿರುವ ಹಿನ್ನೆಲೆ ಅಂದು ಜಿಲ್ಲೆಯ ವ್ಯಾಪ್ತಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶಿಸಿದ್ದಾರೆ.
‘ಜಿಲ್ಲೆಯ ವ್ಯಾಪ್ತಿಯಲ್ಲಿರುವ ಎಲ್ಲಾ ಸರ್ಕಾರಿ ಕಚೇರಿ, ಶಾಲಾ ಕಾಲೇಜು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಎಲ್ಲಾ ವ್ಯವಹಾರ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಮತದಾನ ಮಾಡಲು ಅನುಕೂಲವಾಗುವಂತೆ ಪ್ರಜಾಪ್ರತಿನಿಧಿ ಕಾಯ್ದೆ 1951ರ ಅಡಿ ವೇತನ ಸಹಿತ ರಜೆ ನೀಡಲಾಗುತ್ತಿದೆ. ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಗುಣವಾಗುವಂತೆ ಸಂಬಂಧಿಸಿದ ಇಲಾಖೆ ಹಾಗೂ ಸಂಸ್ಥೆಗಳು ಅಗತ್ಯ ವ್ಯವಸ್ಥೆ ಮಾಡಬೇಕು’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.