ADVERTISEMENT

ಕಾರವಾರ: ಅಂಚೆ ಮತದಾನ ಪ್ರಕ್ರಿಯೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 1 ಮೇ 2024, 13:41 IST
Last Updated 1 ಮೇ 2024, 13:41 IST
   

ಕಾರವಾರ: ಜಿಲ್ಲೆಯ ಅಗತ್ಯ ಸೇವಾ ಗೈರು ಮತದಾರರಿಗೆ ಅಂಚೆ ಮತದಾನದ ಮೂಲಕ ಮತ ಚಲಾಯಿಸುವ ಪ್ರಕ್ರಿಯೆ ಬುಧವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ತೆರೆಯಲಾಗಿರುವ ಮತಗಟ್ಟೆಯಲ್ಲಿ ಆರಂಭಗೊಂಡಿದೆ.

ಮೇ 3ರ ವರೆಗೆ ಜಿಲ್ಲಾಧಿಕಾರಿ ಕಚೇರಿಯ ಎರಡನೇ ಮಹಡಿಯಲ್ಲಿರುವ ಮತಗಟ್ಟೆಯಲ್ಲಿ ಮತದಾನ ಪ್ರಕ್ರಿಯೆಗೆ ಅವಕಾಶ ಕಲ್ಪಿಸಲಾಗಿದೆ. ಒಟ್ಟು 768 ಮಂದಿ ಅಂಚೆ ಮತದಾನಕ್ಕೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಪೊಲೀಸ್, ಆರೋಗ್ಯ, ರೈಲ್ವೆ, ಅಗ್ನಿಶಾಮಕ, ಸಾರಿಗೆ ಸಂಸ್ಥೆ, ಪತ್ರಕರ್ತರು ಸೇರಿದಂತೆ ಒಟ್ಟು 16 ಇಲಾಖೆಗಳ ಸಿಬ್ಬಂದಿಗೆ ಈ ಮತದಾನದ ಸೌಲಭ್ಯ ಕಲ್ಪಿಸಲಾಗಿದೆ.

ಮೊದಲ ದಿನ ಹಲವರು ಮತ ಚಲಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.