ADVERTISEMENT

ಅಂಕೋಲಾ: ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ರಾಜೇಶ ನಾಯಕ ಮನೆ ಮೇಲೆ ದಾಳಿ

ಉಡುಪಿಯ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ರಾಜೇಶ ಹಮ್ಮಣ್ಣ ನಾಯಕ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2023, 6:32 IST
Last Updated 30 ಅಕ್ಟೋಬರ್ 2023, 6:32 IST
<div class="paragraphs"><p>ಅಂಕೋಲಾ ತಾಲ್ಲೂಕಿನ ಬೇಲೆಕೇರಿ ಗ್ರಾಮದಲ್ಲಿರುವ ರಾಜೇಶ ಹಮ್ಮಣ್ಣ ನಾಯಕ ಅವರ ಮನೆ.</p></div>

ಅಂಕೋಲಾ ತಾಲ್ಲೂಕಿನ ಬೇಲೆಕೇರಿ ಗ್ರಾಮದಲ್ಲಿರುವ ರಾಜೇಶ ಹಮ್ಮಣ್ಣ ನಾಯಕ ಅವರ ಮನೆ.

   

ಕಾರವಾರ: ಅಂಕೋಲಾ ತಾಲ್ಲೂಕಿನ ಬೇಲೆಕೇರಿ ಗ್ರಾಮದಲ್ಲಿರುವ ಉಡುಪಿಯ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ರಾಜೇಶ ಹಮ್ಮಣ್ಣ ನಾಯಕ ಅವರ ಮೂಲ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಸೋಮವಾರ ಬೆಳಿಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

ಅಧಿಕಾರಿಯ ಪಾಲಕರು ವಾಸವಿರುವ ಈ ಮನೆಗೆ ತೆರಳಿದ ಅಧಿಕಾರಿಗಳು ದಾಖಲೆ ಪತ್ರಗಳನ್ನು ಪರಿಶೀಲಿಸಿದರು.

ADVERTISEMENT

'ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿರುವ ರಾಜೇಶ ಅವರ ಕಚೇರಿ, ಮನೆ ಮೇಲೆಯೂ ದಾಳಿ ನಡೆದಿದೆ. ಅವರ ಮೂಲ ನಿವಾಸದಲ್ಲಿ ಕೆಲವು ಆಸ್ತಿ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದ್ದು ಪರಿಶೀಲಿಸಲಾಗುತ್ತಿದೆ' ಎಂದು ಲೋಕಾಯುಕ್ತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.