ADVERTISEMENT

ಕಾರವಾರ: ಕೆಡಿಎ ಜೆಇಇ ಮನೆ ಮೇಲೆ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2024, 4:56 IST
Last Updated 27 ಮಾರ್ಚ್ 2024, 4:56 IST
   

ಕಾರವಾರ: ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ (ಕೆಡಿಎ) ಜ್ಯೂನಿಯರ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಪ್ರಕಾಶ ರೇವಣಕರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಬುಧವಾರ ದಾಳಿ ನಡೆಸಿದೆ.

ಇಲ್ಲಿನ ಕಾಜುಬಾಗದಲ್ಲಿರುವ ಕೆಡಿಎ ಕಚೇರಿ, ಲಿಂಗನಾಯ್ಕವಾಡಾದಲ್ಲಿರುವ ಪ್ರಕಾಶ್ ಅವರ ಮನೆ, ಹಬ್ಬುವಾಡಾದಲ್ಲಿರುವ ಫ್ಲ್ಯಾಟ್, ಅಂಕೋಲಾ ತಾಲ್ಲೂಕಿನ ಅವರ್ಸಾ ಗ್ರಾಮದಲ್ಲಿರುವ ಮೂಲಮನೆ ಮೇಲೆ ಪ್ರತ್ಯೇಕ ತಂಡಗಳು ದಾಳಿ ನಡೆಸಿ, ದಾಖಲೆ ಪರಿಶೀಲನೆಯಲ್ಲಿ ತೊಡಗಿವೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಕಾರವಾರ, ಚಿಕ್ಕಮಗಳೂರು, ಧಾರವಾಡದಿಂದ ಅಧಿಕಾರಿಗಳ ತಂಡ ದಾಖಲೆ ಪರಿಶೀಲನೆ ಕಾರ್ಯದಲ್ಲಿ ತೊಡಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.