ಮಾರುತಿ ಯಶವಂತ ಸಾಳ್ವೆ
ಕಾರವಾರ: ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಕೋಲಸಿರ್ಸಿ ಗ್ರಾಮದ ಕೋಲಸಿರ್ಸಿ ಗ್ರೂಪ್ ಗ್ರಾಮಗಳ ಸೇವಾ ಸಹಕಾರ ಸಂಘದ ಕಾರ್ಯದರ್ಶಿ ಮಾರುತಿ ಯಶವಂತ ಸಾಳ್ವೆ ಮನೆ ಮೇಲೆ ಮಂಗಳವಾರ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
‘ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ದೂರಿನ ಹಿನ್ನೆಲೆಯಲ್ಲಿ ಮಾರುತಿ ಅವರ ಹಳಿಯಾಳ ತಾಲ್ಲೂಕಿನ ಬೆಳವಟಗಿ ಮತ್ತು ಸಿದ್ದಾಪುರ ಪಟ್ಟಣದಲ್ಲಿರುವ ಮನೆಗಳ ಮೇಲೆ, ಹಳಿಯಾಳ ಪಟ್ಟಣದಲ್ಲಿರುವ ಶಾಪಿಂಗ್ ಕಾಂಪ್ಲೆಕ್ಸ್ ಮೇಲೆ ದಾಳಿ ನಡೆಸಲಾಗಿದೆ’ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
‘ಕಳೆದ 20 ವರ್ಷಗಳಿಂದ ಸಹಕಾರ ಸಂಘದ ಕಾರ್ಯದರ್ಶಿಯಾಗಿರುವ ಮಾರುತಿ ಆದಾಯ ಮೀರಿ ಆಸ್ತಿ ಸಂಪಾದಿಸಿದ್ದಾರೆ ಎಂಬ ದೂರುಗಳಿದ್ದವು. ದಾಳಿ ನಡೆಸಿದ ವೇಳೆ ಆಸ್ತಿಗೆ ಸಂಬಂಧಿಸಿದ ಹಲವು ದಾಖಲೆ ವಶಕ್ಕೆ ಪಡೆಯಲಾಗಿದೆ. ಅವರು ಹೊಂದಿರುವ ನಗದು, ಆಭರಣಗಳ ಮಾಹಿತಿ ಕಲೆಹಾಕಲಾಗುತ್ತಿದೆ. ಪರಿಶೀಲನೆ ಬಳಿಕ ಮಾಹಿತಿ ನೀಡಲಾಗವುದು’ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.