ADVERTISEMENT

ಕಾರವಾರ: ಲೋಕಾಯುಕ್ತ ತಾಲ್ಲೂಕು ಭೇಟಿ 16, 19ಕ್ಕೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2025, 5:10 IST
Last Updated 11 ಡಿಸೆಂಬರ್ 2025, 5:10 IST
<div class="paragraphs"><p>ಕರ್ನಾಟಕ ಲೋಕಾಯುಕ್ತ</p></div>

ಕರ್ನಾಟಕ ಲೋಕಾಯುಕ್ತ

   

– ಪ್ರಜಾವಾಣಿ ಚಿತ್ರ

ಕಾರವಾರ: ಲೋಕಾಯುಕ್ತ ಅಧಿಕಾರಿಗಳ ತಾಲ್ಲೂಕು ಭೇಟಿ ಕಾರ್ಯಕ್ರಮವು ಡಿ.16ರಂದು ಬೆಳಿಗ್ಗೆ 11 ಗಂಟೆಗೆ ಮುಂಡಗೋಡ ಹಾಗೂ 19ರಂದು ಬೆಳಿಗ್ಗೆ ಭಟ್ಕಳದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ನಡೆಯಲಿದೆ.

ADVERTISEMENT

ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಭರ್ತಿ ಮಾಡಿದ ದೂರುಗಳನ್ನು ಸ್ವೀಕಾರ ಮಾಡಿ, ವಿಚಾರಣೆ ನಡೆಸಲಾಗುವುದು. ಸರ್ಕಾರಿ ಕಚೇರಿಯಲ್ಲಿ ಸಾರ್ವಜನಿಕ ಕೆಲಸಗಳನ್ನು ನಿರ್ವಹಿಸಲು ಲಂಚಕ್ಕೆ ಬೇಡಿಕೆ ಮತ್ತು ಅರ್ಜಿಗಳ ವಿಲೇವಾರಿ ಮಾಡುವಲ್ಲಿ ಅನಗತ್ಯ ವಿಳಂಬ, ಸರ್ಕಾರಿ ಹಣ ದುರುಪಯೋಗ, ಕರ್ತವ್ಯ ಲೋಪ, ಕಳಪೆ ಕಾಮಗಾರಿ ಮಾಡುವ ಸರ್ಕಾರಿ ಅಧಿಕಾರಿ ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದು.

ಹೆಚ್ಚಿನ ಮಾಹಿತಿಗೆ 08382-295293, 220198, 222250, 222022, 229988 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.