ADVERTISEMENT

ಲಾರಿ– ಬೈಕ್ ಡಿಕ್ಕಿ: ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2020, 3:19 IST
Last Updated 23 ಅಕ್ಟೋಬರ್ 2020, 3:19 IST

ಕಾರವಾರ: ನಗರದ ಬಿಣಗಾದಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ಸಂಜೆ ಲಾರಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಮನೋಜ್ ರೇವಣಕರ್ ಮತ್ತು ಶ್ರುತಿ ಮೃತರು. ಮಹಾರಾಷ್ಟ್ರದ ಕೊಲ್ಲಾಪುರದವರಾದ ಇವರು, ಚೆಂಡಿಯಾದಲ್ಲಿ ನೃತ್ಯ ತರಬೇತಿ ನೀಡುತ್ತ ಅಲ್ಲೇ ವಾಸವಿದ್ದರು. ಮನೋಜ್ ಸ್ಥಳದಲ್ಲೇ ಮೃತಪಟ್ಟರೆ, ಶ್ರುತಿ ಆಸ್ಪತ್ರೆಯಲ್ಲಿ ಅಸುನೀಗಿದರು ಎಂದು ಪೊಲೀಸರು ತಿಳಿಸಿದ್ದಾರೆ.‌

ಗ್ರಾಮೀಣ ಠಾಣೆ ಸರ್ಕಲ್ ಇನ್‌ಸ್ಪೆಕ್ಟರ್ ಸಂತೋಷ್ ಶೆಟ್ಟಿ ಹಾಗೂ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಪಘಾತ ಸಂಬಂಧ ತನಿಖೆ ಮುಂದುವರಿದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.