ಸಾವು
(ಪ್ರಾತಿನಿಧಿಕ ಚಿತ್ರ)
ಹೊನ್ನಾವರ: ತಾಲ್ಲೂಕಿನ ಕೆಕ್ಕಾರ ಗ್ರಾಮದ ಮೂಲೆಗದ್ದೆಯಲ್ಲಿ ಶನಿವಾರ ತೆಂಗಿನಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮೂಲೆಗದ್ದೆಯ ಕೂಲಿಕಾರ ಉಮೇಶ ಹನಮಂತ ಗೌಡ(42) ಮೃತರು. ತೆಂಗಿನಕಾಯಿ ಕೀಳಲು ಉಮೇಶ ತನ್ನ ಮನೆಯ ಹಿಂದಿರುವ ತೆಂಗಿನ ಮರ ಹತ್ತಿದಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು, ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.