ADVERTISEMENT

ಯಲ್ಲಾಪುರ: ವಾಹನ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2022, 13:02 IST
Last Updated 27 ಆಗಸ್ಟ್ 2022, 13:02 IST
ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ಬೈಕ್
ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ಬೈಕ್   

ಯಲ್ಲಾಪುರ: ತಾಲ್ಲೂಕಿನ ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಶನಿವಾರ ಸಂಜೆ ಬೈಕ್‌ಗೆ ವಾಹನವೊಂದು ಡಿಕ್ಕಿ ಹೊಡೆದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಂಕೋಲಾ ತಾಲ್ಲೂಕಿನ ಕಲ್ಲೇಶ್ವರದ ಗುರುಪ್ರಸಾದ ಗಾಂವ್ಕರ್ (30) ಮೃತರು.

ಪೌರೋಹಿತ್ಯ ನಡೆಸುತ್ತಿದ್ದ ಅವರು, ಕಲ್ಲೇಶ್ವರಕ್ಕೆ ವಾಪಸ್ ತೆರಳುತ್ತಿದ್ದಾಗ ಯಾವುದೋ ವಾಹನ ಬೈಕ್‌ಗೆ ಡಿಕ್ಕಿ‌ ಹೊಡೆದಿದೆ. ನೆಲಕ್ಕೆ ಬಿದ್ದ ಅವರ ತಲೆ ಮತ್ತು ಶರೀರಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿವೆ. ವಾಹನವನ್ನು ಚಾಲಕ ನಿಲ್ಲಿಸಿ ಗಾಯಾಳುವನ್ನು ಉಪಚರಿಸುವ ಕನಿಷ್ಠ ಸೌಜನ್ಯವನ್ನೂ ತೋರಿಸದೇ ಪರಾರಿಯಾಗಿದ್ದಾನೆ.

ಯಲ್ಲಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗೆ ಹುಡುಕಾಟ ನಡೆಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.