ಸಾವು
ಪ್ರಾತಿನಿಧಿಕ ಚಿತ್ರ
ಗೋಕರ್ಣ: ಸಮೀಪದ ತದಡಿಯ ಜಾಮಿಯಾ ಮಸೀದಿ ದರ್ಗಾದಲ್ಲಿ ನಡೆದ ಉರುಸ್ ಕಾರ್ಯಕ್ರಮಕ್ಕೆ ಬಂದ ಬೀದಿಬದಿ ವ್ಯಾಪಾರಿ, ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಹೊನ್ನಾವರದ ಶಾಬೀರ್ ನಜೀರ್ ಮಮದಾ(50) ಮೃತರು. ಇವರು ಭಾನುವಾರ ಸಂಜೆ ತದಡಿಗೆ ವ್ಯಾಪಾರಕ್ಕೆಂದು ಅಂಗಡಿ ಸಮೇತ ಬಂದಿದ್ದರು. ಸೋಮವಾರ ಬೆಳಗಿನ ಜಾವ 5 ಗಂಟೆಯವರೆಗೂ ವ್ಯಾಪಾರ ಮಾಡಿದ್ದರು. ನಂತರ ಸ್ವಲ್ಪ ವಿಶ್ರಾಂತಿ ಪಡೆದು ಊರಿಗೆ ಹೋಗಲು ಬಸ್ಸಿಗೆ ಕಾಯುತ್ತಿದ್ದಾಗ, ಬಸ್ ನಿಲ್ದಾಣದಲ್ಲಿಯೇ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.