
ಸಿ.ಮಂಜುಳಾ
ಶಿರಸಿ: ‘ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್ ಬಗ್ಗೆ ಸಿಎಂ ಸಿದ್ದರಾಮಯ್ಯ ಏಕವಚನ ಬಳಸಿದ್ದು ಖಂಡನೀಯ. ಈ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಬಹಿರಂಗ ಕ್ಷಮೆಯಾಚಿಸಬೇಕು' ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಸಿ.ಮಂಜುಳಾ ಆಗ್ರಹಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿ ಆಯೋಜಿಸಿ ಮಾತನಾಡಿದ ಅವರು, 'ಮಹಿಳೆ ಎಂಬ ಕಾರಣಕ್ಕೆ ದೇಶದ ಅರ್ಥ ಸಚಿವರನ್ನೂ ಬಿಡದೆ ಅಗೌರವಗಾಗಿ ವರ್ತಿಸುವುದನ್ನು ಕಾಂಗ್ರೆಸ್ ನಾಯಕರು ಬಿಡಬೇಕು' ಎಂದರು.
'ರಾಜ್ಯದಲ್ಲಿ ಬಾಲಗರ್ಭಿಣಿಯರ ಸಂಖ್ಯೆ ಹೆಚ್ಚುತ್ತಿದೆ. ಹಾಸ್ಟೆಲ್‍ಗಳಲ್ಲಿ ಇಂಥ ಪ್ರಕರಣ ಹೆಚ್ಚುತ್ತಿದೆ. ಸಚಿವೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪುರುಷ ರಾಜಕಾರಣದ ವ್ಯವಸ್ಥೆ ಬಗ್ಗೆ ಪ್ರತಿಕ್ರಿಯಿಸುವಷ್ಟು ಮಹಿಳಾ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿಲ್ಲ. ಇದು ದುರಂತದ ಸಂಗತಿ. ಹೀಗಾಗಿ ಅವರು ರಾಜೀನಾಮೆ ನೀಡಬೇಕು' ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.