ADVERTISEMENT

ಬೊಳ್ವೆ: ಹಲವು ಮನೆಗಳ ಗೋಡೆ ಕುಸಿತ

​ಪ್ರಜಾವಾಣಿ ವಾರ್ತೆ
Published 25 ಜುಲೈ 2021, 15:11 IST
Last Updated 25 ಜುಲೈ 2021, 15:11 IST
ಕಾರವಾರ ತಾಲ್ಲೂಕಿನ ಬೊಳ್ವೆಯಲ್ಲಿ ಮುಳಗಡೆಯಾದ ಮನೆಯೊಂದರ ಚಾವಣಿಯ ಹೆಂಚುಗಳನ್ನು ತೆರವು ಮಾಡಿ ಸಾಮಗ್ರಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸಾಗಿಸಿದ ದೃಶ್ಯ
ಕಾರವಾರ ತಾಲ್ಲೂಕಿನ ಬೊಳ್ವೆಯಲ್ಲಿ ಮುಳಗಡೆಯಾದ ಮನೆಯೊಂದರ ಚಾವಣಿಯ ಹೆಂಚುಗಳನ್ನು ತೆರವು ಮಾಡಿ ಸಾಮಗ್ರಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸಾಗಿಸಿದ ದೃಶ್ಯ   

ಕಾರವಾರ: ಕದ್ರಾ ಜಲಾಶಯದಿಂದ ಸತತವಾಗಿ ನೀರು ಬಿಡುಗಡೆ ಮಾಡಿದ ಪರಿಣಾಮ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಳ್ವೆಯಲ್ಲಿ ಹಲವು ಮನೆಗಳ ಗೋಡೆಗಳು ಕುಸಿದಿವೆ.

ಇಲ್ಲಿ ಕೃಷಿ ಚಟುವಟಿಕೆಗಳನ್ನೇ ಜೀವನಾಧಾರವನ್ನಾಗಿ ಮಾಡಿಕೊಂಡವರೇ ಅಧಿಕ. 2019ರಲ್ಲಿ ಭಾರಿ ಮಳೆ ಸುರಿದು, ಕದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿತ್ತು. ಆಗ ಕೂಡ ಹಲವು ಮನೆಗಳು ಜಲಾವೃತವಾಗಿದ್ದವು. ಈ ವರ್ಷವೂ ಅದೇ ಪರಿಸ್ಥಿತಿ ಉದ್ಭವವಾಗಿದೆ. ಈ ರೀತಿ ವರ್ಷ ವರ್ಷವೂ ಆಗುತ್ತಿದ್ದರೆ ಮುಂದಿನ ದಿನಗಳಲ್ಲಿ ಜೀವನ ನಡೆಸುವುದು ಹೇಗೆ ಎಂಬ ಆತಂಕ ಸ್ಥಳೀಯರದ್ದಾಗಿದೆ. ತಮಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT