
ಪ್ರಜಾವಾಣಿ ವಾರ್ತೆ
ಕಾರವಾರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆ ಬಳಿ ಗಾಂಜಾ ಸೇವನೆಯಲ್ಲಿ ತೊಡಗಿದ್ದ ಆರೋಪದಡಿ ಮೊಬೈಲ್ ವ್ಯಾಪಾರಿಯೊಬ್ಬರನ್ನು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
‘ರಾಕೇಶ ದೇವ್ರ (34) ಬಂಧಿತ ಆರೋಪಿ. ಈತ ಬಿಲ್ಟ್ ವೃತ್ತದ ಬಳಿ ಹೆದ್ದಾರಿಯ ಮೇಲ್ಸೇತುವೆ ಅಡಿಯಲ್ಲಿ ಗುರುವಾರ ಗಾಂಜಾ ಸೇವನೆ ಮಾಡುತ್ತಿದ್ದ. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿದ್ದು ದೃಢಪಟ್ಟಿದೆ. ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.