ADVERTISEMENT

ಭಟ್ಕಳ: ಗಾಂಜಾ ಸೇವನೆ- ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2026, 8:06 IST
Last Updated 28 ಫೆಬ್ರುವರಿ 2026, 8:06 IST
<div class="paragraphs"><p>ಬಂಧನ</p></div>

ಬಂಧನ

   

ಭಟ್ಕಳ: ತಾಲ್ಲೂಕಿನ ಕರಿಕಲ್‌ ರಸ್ತೆಯಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಜಾಲಿ ಮೂಸಾನಗರ ನಿವಾಸಿ ಅಬ್ದುಲ್‌ ಮಲೀಕ ಮೊಹಮ್ಮದ ಖುರೇಶಿ (26) ಎಂಬ ವ್ಯಕ್ತಿಯನ್ನು ಗ್ರಾಮೀಣ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಮುರುಡೇಶ್ವರ ಕಾಯ್ಕಿಣಿ ಕುಂಬಾರಕೇರಿ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ಕಾಯ್ಕಿಣಿಯ ಕುಂಬಾರಕೇರಿ ನಿವಾಸಿ ರೋಹಿತ್‌ ವಿ ಕುಂಬಾರ (18) ವ್ಯಕ್ತಿಯನ್ನು ಮುರುಡೇಶ್ವರ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಇಬ್ಬರನ್ನೂ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮುರುಡೇಶ್ವರ ಹಾಗೂ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.