ADVERTISEMENT

ವಿಗ್ರಹ ವಿಸರ್ಜನೆ; ಮಾರಿಕಾಂಬಾ ದೇವಿ ದರ್ಶನ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2022, 16:09 IST
Last Updated 9 ಮಾರ್ಚ್ 2022, 16:09 IST
ಶಿರಸಿಯ ಬಿಡ್ಕಿಬೈಲಿನಲ್ಲಿರುವ ಜಾತ್ರಾ ಗದ್ದುಗೆಯಲ್ಲಿ ಮಾರಿಕೋಣಕ್ಕೆ ಪೂಜೆ ಸಲ್ಲಿಸಲಾಯಿತು.
ಶಿರಸಿಯ ಬಿಡ್ಕಿಬೈಲಿನಲ್ಲಿರುವ ಜಾತ್ರಾ ಗದ್ದುಗೆಯಲ್ಲಿ ಮಾರಿಕೋಣಕ್ಕೆ ಪೂಜೆ ಸಲ್ಲಿಸಲಾಯಿತು.   

ಶಿರಸಿ: ಮಾರಿಕಾಂಬಾ ದೇವಿಯ ಜಾತ್ರೆಯ ಪೂರ್ವ ದಿಕ್ಕಿನ ಕೊನೆಯ ಹೊರಬೀಡು ಮಂಗಳವಾರ ರಾತ್ರಿ ನಡೆದಿದ್ದು ಬುಧವಾರ ದೇವಿ ವಿಗ್ರಹ ವಿಸರ್ಜಿಸಲಾಯಿತು. ಹೀಗಾಗಿ ದೇವಸ್ಥಾನದ ಗರ್ಭಗುಡಿಯ ಬಾಗಿಲು ಬುಧವಾರ ಮಧ್ಯಾಹ್ನ ಮುಚ್ಚಲಾಯಿತು.

ಜಾತ್ರೆಗೆ ಮುನ್ನ ನಡೆಯುವ ಧಾರ್ಮಿಕ ವಿಧಿವಿಧಾನಗಳ ಭಾಗವಾಗಿ ದೇವಿಯ ವಿಗ್ರಹವನ್ನು ಕಳಚಲಾಯಿತು. ದೇವಿ ಪ್ರತಿಷ್ಠಾಪನೆಗೊಳ್ಳುವ ಬಿಡ್ಕಿಬೈಲಿನ ಜಾತ್ರಾ ಗದ್ದುಗೆಗೆ ಮೇಟಿ ದೀಪ ಒಯ್ದು ಅಲ್ಲಿ ಪಲ್ಲಕ್ಕಿಗೆ ಪೂಜೆ ಸಲ್ಲಿಸಲಾಯಿತು.

ಗದ್ದುಗೆ ಆವರಣದಲ್ಲಿ ಕಲಶ ಪ್ರತಿಷ್ಠಾಪನೆ ಮಾಡಿ ಅಂಕೆ ಹಾಕುವ ಕಾರ್ಯಕ್ರಮ ನಡೆಯಿತು. ಇದೇ ವೇಳೆ ಮಾರಿಕೋಣ ಮಹಿಷನಿಗೆ ಅಭ್ಯಂಜನ ಮಾಡಿಸಿ ಪೂಜೆ ಸಲ್ಲಿಸಲಾಯಿತು. ದೇವಸ್ಥನದ ಧರ್ಮದರ್ಶಿ ಮಂಡಳದವರು, ಬಾಬುದಾರರು, ಭಕ್ತರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.