ADVERTISEMENT

ಇ–ಖಾತೆ ನಿಯಮ ಸರಳೀಕರಣಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2018, 13:46 IST
Last Updated 9 ಅಕ್ಟೋಬರ್ 2018, 13:46 IST
ಶಿರಸಿಯಲ್ಲಿ ಫೋಟೊಗ್ರಾಫರ್ಸ್ ಮತ್ತು ವಿಡಿಯೊಗ್ರಾಫರ್ಸ್ ಸಂಘದ ಸದಸ್ಯರು ಉಪವಿಭಾಗಾಧಿಕಾರಿ ಕಚೇರಿಯ ಸಹಾಯಕ ರಮೇಶ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು
ಶಿರಸಿಯಲ್ಲಿ ಫೋಟೊಗ್ರಾಫರ್ಸ್ ಮತ್ತು ವಿಡಿಯೊಗ್ರಾಫರ್ಸ್ ಸಂಘದ ಸದಸ್ಯರು ಉಪವಿಭಾಗಾಧಿಕಾರಿ ಕಚೇರಿಯ ಸಹಾಯಕ ರಮೇಶ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು   

ಶಿರಸಿ: ಇ– ಖಾತಾ ಸಮಸ್ಯೆಯಿಂದ ದುಡಿಯುವ ಕೈಗಳಿಗೆ ಕೆಲಸ ಇಲ್ಲದಂತೆ ಆಗಿದೆ. ತಕ್ಷಣವೇ ನಿಯಮ ಸರಳೀಕರಣ ಮಾಡಬೇಕು ಎಂದು ಒತ್ತಾಯಿತಿ, ಫೋಟೊಗ್ರಾಫರ್ಸ್ ಮತ್ತು ವಿಡಿಯೊಗ್ರಾಫರ್ಸ್ ಅಸೋಸಿಯೇಷನ್ ತಾಲ್ಲೂಕು ಘಟಕದ ಸದಸ್ಯರು ಮಂಗಳವಾರ ಇಲ್ಲಿ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.

ಇಲಾಖೆಗಳ ನಡುವಿನ ಸಮನ್ವಯದ ಕೊರತೆಯಿಂದ ಆಗಿರುವ ತಾಂತ್ರಿಕ ತೊಂದರೆ, ಇ– ಖಾತೆ ಸಮಸ್ಯೆ ಸೃಷ್ಟಿಯಾಗಲು ಕಾರಣವಾಗಿದೆ. ಇದಕ್ಕೆ ಕಾರ್ಮಿಕರು, ಶ್ರಮಿಕರು ಬಲಿಪಶುಗಳಾಗುತ್ತಿದ್ದಾರೆ.ಇ ಸ್ವತ್ತು ಸಮಸ್ಯೆ ಪರಿಹಾರ ಹೋರಾಟ ಸಮಿತಿಯ ಹೋರಾಟಕ್ಕೆ ಸಂಘಟನೆ ಬೆಂಬಲ ನೀಡುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಸಂಘದ ಪ್ರಮುಖರಾದ ರವಿ ಕೊಳೇಕರ, ರಮೇಶ ಹೆಗಡೆ, ರಾಜು ಕಾನಸೂರು, ರವಿ ಹಿರೇಮಠ, ಪಾವದ್, ರವೀಂದ್ರ ಜೆ.ಕೆ, ಎಂ.ಡಿ.ರವಿರಾಜ್, ಸಂತೋಷ ಸಿರ್ಸಿಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT