ADVERTISEMENT

ಗುತ್ತಿಗೆ ನೌಕರರ ಮುಂದುವರಿಕೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2019, 12:22 IST
Last Updated 16 ಸೆಪ್ಟೆಂಬರ್ 2019, 12:22 IST
ಜಿಲ್ಲಾ ಸರ್ಕಾರಿ ಗುತ್ತಿಗೆ ನೌಕರರ ಸಂಘದ ಸದಸ್ಯರು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಜೊತೆ ಚರ್ಚಿಸಿದರು
ಜಿಲ್ಲಾ ಸರ್ಕಾರಿ ಗುತ್ತಿಗೆ ನೌಕರರ ಸಂಘದ ಸದಸ್ಯರು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಜೊತೆ ಚರ್ಚಿಸಿದರು   

ಶಿರಸಿ: ಆರೋಗ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಗ್ರೂಪ್ ‘ಡಿ’ ನೌಕರರನ್ನು ಕೆಲಸದಲ್ಲಿ ಮುಂದುವರಿಸುವಂತೆ ಒತ್ತಾಯಿಸಿ, ಜಿಲ್ಲಾ ಸರ್ಕಾರಿ ಗುತ್ತಿಗೆ ನೌಕರರ ಹೋರಾಟ ಸಂಘದ ಸದಸ್ಯರು ಸೋಮವಾರ ಇಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮನವಿ ನೀಡಿ ಒತ್ತಾಯಿಸಿದರು.

ಜಿಲ್ಲೆಯ ಕೆಲ ತಾಲ್ಲೂಕುಗಳಲ್ಲಿ ಹಾಲಿ ಇರುವ ಕೆಲಸಗಾರರನ್ನೇ ಮುಂದುವರಿಸಲಾಗಿದೆ. ಆದರೆ, ಕೆಲವು ತಾಲ್ಲೂಕುಗಳಲ್ಲಿ ಅನುದಾನ ಕೊರತೆಯ ನೆಪವೊಡ್ಡಿ, ಹಾಲಿ ಇರುವ ಕೆಲಸಗಾರರನ್ನು ತೆಗೆದು, ಹೊಸಬರನ್ನು ನೇಮಿಸಿಕೊಳ್ಳಲಾಗಿದೆ. ಸಕಾಲದಲ್ಲಿ ವೇತನ ಪಾವತಿಸದೇ ಅನ್ಯಾಯ ಮಾಡಲಾಗುತ್ತಿದೆ. ಈ ಕೆಲಸವನ್ನೇ ನಂಬಿ ಜೀವನ ನಡೆಸುವವರಿಗೆ ಸರಿಯಾಗಿ ವೇತನ ಪಾವತಿಸಬೇಕು ಮತ್ತು ಯಾವುದೇ ನೌಕರನನ್ನು ಕೆಲಸದಿಂದ ತೆಗೆದು ಹಾಕಬಾರದು ಎಂದು ಅವರು ಒತ್ತಾಯಿಸಿದರು. ಧನಂಜಯ ನಾಯ್ಕ, ಸುಬ್ರಾಯ, ಭಾಗ್ಯಾ, ಜ್ಯೋತಿ, ಪ್ರೇಮಾ, ಕೇಶವ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT