ADVERTISEMENT

ಗೋವು ಕಳವು ಮಾಡಿದರೆ ನಡುರಸ್ತೆಯಲ್ಲಿ ಗುಂಡೇಟು: ಸಚಿವ ವೈದ್ಯ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2025, 9:18 IST
Last Updated 3 ಫೆಬ್ರುವರಿ 2025, 9:18 IST
<div class="paragraphs"><p>ಸಚಿವ ಮಂಕಾಳ ವೈದ್ಯ</p></div>

ಸಚಿವ ಮಂಕಾಳ ವೈದ್ಯ

   

ಕಾರವಾರ: ಗೋವು ಕಳವು ಮಾಡುವ ಘಟನೆ ಉತ್ತರ ಕನ್ನಡದಲ್ಲಿ ಮತ್ತೆ ನಡೆದರೆ ಆರೋಪಿಗಳಿಗೆ ನಡು ರಸ್ತೆಯಲ್ಲಿ ಗುಂಡೇಟು ನೀಡಲು ಆದೇಶಿಸುವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಎಚ್ಚರಿಸಿದರು.

ಇಲ್ಲಿ ಸೋಮವಾರ ಕೆಡಿಪಿ ಸಭೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಗೋವು ಕಳವು ಪ್ರಕರಣಗಳು ಜಿಲ್ಲೆಯಲ್ಲಿ ಹಲವು ವರ್ಷದಿಂದ ನಡೆಯುತ್ತಿದೆ. ಅದನ್ನು ತಡೆಯಲು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಗೋವು ಕಳವು ಮಾಡಿದವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು.

ADVERTISEMENT

ಬಿಜೆಪಿ ಸರ್ಕಾರದ ಅವಧಿಯಲ್ಲೂ ಗೋವು ಕಳವು ನಡೆದಿದೆ. ಕುಮಟಾ ಶಾಸಕ ದಿನಕರ ಶೆಟ್ಟಿ ಮುಖ್ಯಮಂತ್ರಿ, ಗೃಹ ಸಚಿವರಿಗೆ ಟೀಕಿಸುತ್ತಿದ್ದಾರೆ. ಅವರ ಸರ್ಕಾರದ ಅವಧಿಯಲ್ಲಿ ಕ್ರಮ ಇರಲಿಲ್ಲ. ನಾವು ಮುಲಾಜಿಲ್ಲದೆ ಕ್ರಮ ಜರುಗಿಸಿದ್ದೇವೆ ಎಂದರು.

ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ ನಮ್ಮದೇ ಪಕ್ಷದ ಶಾಸಕರಂತೆ. ಜಿಲ್ಲೆಯ ಅಭಿವೃದ್ಧಿಗೆ ಅವರು ಬೆಂಬಲಿಸಿ, ಕೆಲಸ ಮಾಡುತ್ತಿದ್ದಾರೆ. ಕುಮಟಾದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ. ಅಲ್ಲಿ ಪಕ್ಷದ ಕಾರ್ಯಕರ್ತರ ನೆರವಿನಿಂದ ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.