ADVERTISEMENT

ಗ್ರಾಮೀಣ ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರಲಿ: ಹೆಬ್ಬಾರ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2022, 13:56 IST
Last Updated 10 ಆಗಸ್ಟ್ 2022, 13:56 IST
ಶಿರಸಿ ತಾಲ್ಲೂಕಿನ ಬನವಾಸಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಪದವಿಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಕ್ರೀಡಾ ಜ್ಯೋತಿ ಹಸ್ತಾಂತರಿಸುವ ಮೂಲಕ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಚಾಲನೆ ನೀಡಿದರು.
ಶಿರಸಿ ತಾಲ್ಲೂಕಿನ ಬನವಾಸಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಪದವಿಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಕ್ರೀಡಾ ಜ್ಯೋತಿ ಹಸ್ತಾಂತರಿಸುವ ಮೂಲಕ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಚಾಲನೆ ನೀಡಿದರು.   

ಶಿರಸಿ: ‘ಕ್ರೀಡೆಗೆ ಜಾತಿ, ಧರ್ಮದ ಬಂಧಗಳಿಲ್ಲ. ಅವೆಲ್ಲವನ್ನೂ ಮೀರಿ ಸೌಹಾರ್ಧತೆ ಬೆಳೆಸುವ ಕ್ರೀಡಾಕೂಟಗಳ ಮೂಲಕ ಗ್ರಾಮೀಣ ಭಾಗದ ಪ್ರತಿಭೆಗಳು ಮುನ್ನೆಲೆಗೆ ಬರಬೇಕಾಗಿದೆ’ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.

ತಾಲ್ಲೂಕಿನ ಬನವಾಸಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಪದವಿಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಬಡತನದ ಕೀಳರಿಮೆ ಬಿಟ್ಟು ಕ್ರೀಡಾ ಪ್ರತಿಭೆಗಳು ಪ್ರಯತ್ನಶೀಲರಾಗಿ ಮುಂದೆ ಬರಲು ಸರ್ಕಾರ ಸಹಾಯಹಸ್ತ ಚಾಚಲಿದೆ. ಮೋದಿ ಸರ್ಕಾರ ಕ್ರೀಡೆಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿರುವ ಪರಿಣಾಮ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ದೇಶದ ಕ್ರೀಡಾಪಟುಗಳು ಮಿಂಚಿದ್ದಾರೆ’ ಎಂದರು.

‘ಮಳೆಗಾಲದಲ್ಲಿ ಕ್ರೀಡಾಕೂಟ ನಡೆಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುತ್ತಿರುವುದು ಗಮನಕ್ಕೆ ಬಂದಿದೆ. ಸಮಯದಲ್ಲಿ ವಿನಾಯಿತಿ ನೀಡುವ ಸಂಬಂಧ ಸರ್ಕಾರದಮಟ್ಟದಲ್ಲಿ ಚರ್ಚಿಸಲಾಗುವುದು’ ಎಂದು ಭರವಸೆ ನೀಡಿದರು.

ADVERTISEMENT

ತಹಶೀಲ್ದಾರ್ ಶ್ರೀಧರ ಮುಂದಲಮನಿ, ಬನವಾಸಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ತುಳಸಿ ಆರೇರ, ಶಿರಸಿ ಎಪಿ.ಎಂ.ಸಿ. ಅಧ್ಯಕ್ಷ ಪ್ರಶಾಂತ ಗೌಡರ್, ಕಾಲೇಜಿನ ಪ್ರಾಚಾರ್ಯ ಎಂ.ಕೆ.ನಾಯ್ಕ ಹೊಸಳ್ಳಿ, ಮುಖಂಡರಾದ ದ್ಯಾಮಣ್ಣ ದೊಡ್ಮನಿ, ರಾಜಶೇಖರ ಒಡೆಯರ್ ಇದ್ದರು.

ಕಬಡ್ಡಿ, ವಾಲಿಬಾಲ್, ವಿವಿಧ ಬಗೆಯ ಒಳಾಂಗಣ ಕ್ರೀಡಾ ಸ್ಪರ್ಧೆಗಳು ಮೊದಲ ದಿನ ಜರುಗಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.