
ಶಿರಸಿ: ‘ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಇತರೆ, ವಿದ್ಯಾರ್ಥಿಗಳಿಗೆ ಇದು ಪ್ರೇರಣೆಯಾಗುತ್ತದೆ’ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.
ನಗರದ ವೆಂಕಟರಾವ್ ನಿಲೇಕಣಿ ಸರ್ಕಾರಿ ಪದವಿಪೂರ್ವ ಕಾಲೇಜ್‍ನಲ್ಲಿ ಮಂಗಳವಾರ ವಾರ್ಷಿಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಪ್ರತಿಯೊಂದು ಮಕ್ಕಳಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ಆಗ ಇನ್ನಷ್ಟು ಸಾಧನೆ ಮಾಡಲು ಸಹಕಾರಿಯಾಗಲಿದೆ’ ಎಂದರು.
‘ಯಶಸ್ಸು ಸುಲಭವಾಗಿ ಸಿಗುವುದಿಲ್ಲ, ಅದಕ್ಕೆ ಛಲ, ಪರಿಶ್ರಮ ಮತ್ತು ಶ್ರದ್ಧೆ ಬೇಕು. ಸೋಲಿಗೆ ಹೆದರದೆ ಮುನ್ನುಗ್ಗಬೇಕು, ಪ್ರಾಮಾಣಿಕತೆ ಮತ್ತು ಸಮಯಪಾಲನೆ ಮುಖ್ಯ, ಶಿಕ್ಷಕರು ಮಾರ್ಗದರ್ಶನ ನೀಡುವ ಜತೆ ಅವರಿಗೆ ಉತ್ತಮ ಸಂಸ್ಕಾರ ನೀಡಿ ಸಂಸ್ಕಾರವಂತರನ್ನಾಗಿ ರೂಪಿಸಬೇಕು’ ಎಂದರು.
ಸಾಧಕ ವಿದ್ಯಾರ್ಥಿಗಳನ್ನು ಶಾಸಕರು ಗೌರವಿಸಿದರು. ಕಾರ್ಯಕ್ರಮದಲ್ಲಿ ಪ್ರಮುಖರಾದ ಸಂತೋಷ ಶೆಟ್ಟಿ, ಗಣಪತಿ ಭಟ್, ವಸಂತ ನಾಯಕ, ಸುಮಾ ನಾಯ್ಕ, ನಾಗರಾಜ ಗಾಂವಕರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.