ADVERTISEMENT

ನಿರಾಶ್ರಿತರ ಸಮಸ್ಯೆ: ಸಚಿವರಿಂದ ಸ್ಪಂದನೆ -ರೂಪಾಲಿ ನಾಯ್ಕ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2022, 15:40 IST
Last Updated 22 ಸೆಪ್ಟೆಂಬರ್ 2022, 15:40 IST
ವಿಧಾನಸೌಧದಲ್ಲಿ, ಇಂಧನ ಸಚಿವ ಸುನೀಲಕುಮಾರ್ ಕಚೇರಿಯಲ್ಲಿ ಗುರುವಾರ ನಡೆದ ಕೆ.ಪಿ.ಸಿ ವ್ಯವಸ್ಥಾಪಕ ನಿರ್ದೇಶಕರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಶಾಸಕಿ ರೂಪಾಲಿ ನಾಯ್ಕ ಭಾಗವಹಿಸಿದ್ದರು
ವಿಧಾನಸೌಧದಲ್ಲಿ, ಇಂಧನ ಸಚಿವ ಸುನೀಲಕುಮಾರ್ ಕಚೇರಿಯಲ್ಲಿ ಗುರುವಾರ ನಡೆದ ಕೆ.ಪಿ.ಸಿ ವ್ಯವಸ್ಥಾಪಕ ನಿರ್ದೇಶಕರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಶಾಸಕಿ ರೂಪಾಲಿ ನಾಯ್ಕ ಭಾಗವಹಿಸಿದ್ದರು   

ಕಾರವಾರ: ‘ಕದ್ರಾ ನಿರಾಶ್ರಿತರ ಬೇಡಿಕೆ ಈಡೇರಿಸುವಂತೆ ಮಾಡಿದ ಮನವಿಗೆ ಇಂಧನ ಸಚಿವ ಸುನೀಲ್ ಕುಮಾರ್ ಸ್ಪಂದಿಸಿದ್ದಾರೆ. ಅಕ್ಟೋಬರ್ ಎರಡನೇ ವಾರದಲ್ಲಿ ಕಾರವಾರಕ್ಕೆ ಭೇಟಿ ನೀಡಿ, ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದ್ದಾರೆ’ ಎಂದು ಶಾಸಕಿ ರೂಪಾಲಿ ನಾಯ್ಕ ತಿಳಿಸಿದ್ದಾರೆ.

‘ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲಿ ಗುರುವಾರ ಸಚಿವರು ಹಾಗೂ ಕೆ.ಪಿ.ಸಿ ವ್ಯವಸ್ಥಾಪಕ ನಿರ್ದೇಶಕರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಕದ್ರಾ ನಿರಾಶ್ರಿತರ ವಿಷಯವನ್ನು ಪ್ರಸ್ತಾಪಿಸಲಾಯಿತು. 35 ವರ್ಷಗಳ ಹಿಂದೆ ಕದ್ರಾ ಜಲಾಶಯದ ನಿರ್ಮಾಣದ ಸಂದರ್ಭದಲ್ಲಿ ನಿರಾಶ್ರಿತರಾದವರಿಗೆ ಈವರೆಗೂ ಪುನರ್ವಸತಿಯಾಗಿಲ್ಲ. ಅವರಿಗೆ ಪರಿಹಾರವನ್ನೂ ನೀಡದಿರುವ ಬಗ್ಗೆ ತಿಳಿಸಲಾಯಿತು’ ಎಂದು ಮಾಹಿತಿ ನೀಡಿದ್ದಾರೆ.

‘ನಿರಾಶ್ರಿತರಿಗೆ ಕದ್ರಾ ಪುನರ್ವಸತಿ ಕೇಂದ್ರದಲ್ಲಿ ಮನೆಗಳನ್ನು ನೀಡಲಾಗಿದೆ. ಆದರೆ, ಆ ಜಾಗವು ನಿರಾಶ್ರಿತರ ಹಕ್ಕಿಗೆ ಇನ್ನೂ ಒಳಪಟ್ಟಿಲ್ಲ. ಉದ್ಯೋಗದ ಭರವಸೆಯೂ ಈಡೇರಿಲ್ಲ. ಈ ರೀತಿಯ ಹಲವು ಸಮಸ್ಯೆಗಳನ್ನು ನಿರಾಶ್ರಿತರು ಅನುಭವಿಸುತ್ತಿದ್ದಾರೆ ಎಂದು ಸಚಿವರಿಗೆ ಮನವರಿಕೆ ಮಾಡಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.