ADVERTISEMENT

ಬಿತ್ತನೆ ಬೀಜ ಸಮರ್ಪಕವಾಗಿ ಪೂರೈಸಲು ಮನವಿ

​ಪ್ರಜಾವಾಣಿ ವಾರ್ತೆ
Published 4 ಮೇ 2020, 13:39 IST
Last Updated 4 ಮೇ 2020, 13:39 IST
ಶಾಸಕಿ ರೂಪಾಲಿ ನಾಯ್ಕ ಕೃಷಿ ಸಚಿವ ಬಿ.ಸಿ.ಪಾಟೀಲ ಅವರನ್ನು ಶಿರಸಿಯಲ್ಲಿ ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು
ಶಾಸಕಿ ರೂಪಾಲಿ ನಾಯ್ಕ ಕೃಷಿ ಸಚಿವ ಬಿ.ಸಿ.ಪಾಟೀಲ ಅವರನ್ನು ಶಿರಸಿಯಲ್ಲಿ ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು   

ಕಾರವಾರ:ಮುಂಗಾರು ಹಂಗಾಮಿಗೆ ರಿಯಾಯಿತಿ ದರದಲ್ಲಿ ನೀಡುವ ಭತ್ತದ ಬಿತ್ತನೆ ಬೀಜಗಳನ್ನು ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದರೈತರಿಗೆ ಸಮರ್ಪಕವಾಗಿ ಪೂರೈಸಬೇಕು ಎಂದು ಶಾಸಕಿ ರೂಪಾಲಿ ನಾಯ್ಕಕೃಷಿ ಸಚಿವ ಬಿ.ಸಿ.ಪಾಟೀಲಅವರಿಗೆ ಮನವಿ ಮಾಡಿದ್ದಾರೆ.

ಸಚಿವರನ್ನು ಸೋಮವಾರ ಶಿರಸಿಯಲ್ಲಿ ಭೇಟಿ ಮಾಡಿದ ಅವರು, ‘ಕಳೆದ ವರ್ಷಆಗಸ್ಟ್‌ನಲ್ಲಿ ಉಂಟಾದ ಭೀಕರ ಪ್ರವಾಹದಿಂದಾಗಿ ರೈತರು ಬೆಳೆಗಳನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ‌.‌ಅವರಿಗೆ ಅನುಕೂಲ ಮಾಡಿಕೊಡಬೇಕು. ಸ್ಥಳೀಯ ತಳಿಗಳ ಭತ್ತವನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ವ್ಯವಸ್ಥೆ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.

ಮತ್ತೊಂದು ಪತ್ರದಲ್ಲಿ ರೈತರ ವಿವಿಧ ಬೇಡಿಕೆಗಳು ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾರುಕಟ್ಟೆ ಒದಗಿಸುವಂತೆ ಕೋರಿದ್ದಾರೆ. ಕ್ಷೇತ್ರದಲ್ಲಿ ಕಲ್ಲಂಗಡಿ ಹಾಗೂ ಮಾವಿನ ಬೆಳೆಗಳು ಪ್ರಮುಖವಾಗಿವೆ.ಲಾಕ್‌ಡೌನ್ ಇರುವುದರಿಂದ ಮಾರುಕಟ್ಟೆ ಸಮಸ್ಯೆ ಉಲ್ಬಣವಾಗಿದೆ ಎಂದು ಗಮನ ಸೆಳೆದಿದ್ದಾರೆ.

ADVERTISEMENT

ಕೃಷಿ ಭೂಮಿಗಳಿಗೆ ಉಪ್ಪುನೀರು ನುಗ್ಗುವುದನ್ನು ತಡೆಯಲು ಬಾಂದಾರ ನಿರ್ಮಿಸಲು ಸಣ್ಣ ನೀರಾವರಿ ಇಲಾಖೆಗೆ ಶಿಫಾರಸು ಮಾಡಬೇಕು. ಕ್ಷೇತ್ರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಬಲವರ್ಧನೆ ಮಾಡಿ ರೈತಸ್ನೇಹಿಯಾಗಿ ಪರಿವರ್ತನೆ ಮಾಡಲೂ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.