ADVERTISEMENT

ಸಾಧನೆಯ ವೈಭವೀಕರಣ ಅನಗತ್ಯ: ಆರ್.ವಿ.ದೇಶಪಾಂಡೆ

ಶಾಸಕ ಆರ್.ವಿ.ದೇಶಪಾಂಡೆ ಅಭಿಮತ

​ಪ್ರಜಾವಾಣಿ ವಾರ್ತೆ
Published 26 ಜುಲೈ 2020, 14:09 IST
Last Updated 26 ಜುಲೈ 2020, 14:09 IST
ಆರ್‌.ವಿ.ದೇಶಪಾಂಡೆ
ಆರ್‌.ವಿ.ದೇಶಪಾಂಡೆ   

ಶಿರಸಿ: ಕೋವಿಡ್ 19 ಸಾಂಕ್ರಾಮಿಕ ಕಾಯಿಲೆಯ ವಿಷಯ ಪರಿಸ್ಥಿತಿಯಲ್ಲಿ ಸಾಧನೆಗಳ ವೈಭವೀಕರಣ ಅಗತ್ಯವಿರಲಿಲ್ಲ. ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ವರ್ಷದ ಸಾಧನೆಗಳ ಹೊತ್ತಿಗೆ ಬಿಡುಗಡೆಯನ್ನು ಜಿಲ್ಲಾ ಮಟ್ಟದ ಕಾರ್ಯಕ್ರಮಗಳ ಮೂಲಕ ಆಯೋಜಿಸುತ್ತಿರುವುದು ವಿಷಾದನೀಯ’ ಎಂದು ಶಾಸಕ ಆರ್.ವಿ.ದೇಶಪಾಂಡೆ ಪ್ರತಿಕ್ರಿಯಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಜನರು ಭಯದಲ್ಲಿ ಬದುಕನ್ನು ಕಳೆಯುತ್ತಿದ್ದಾರೆ. ಆರ್ಥಿಕ ಚಟುವಟಿಕೆ ಸಂಪೂರ್ಣ ನೆಲಕಚ್ಚಿದೆ. ಅಭಿವೃದ್ಧಿ ಕಾಮಗಾರಿಗಳು ನಿಂತುಹೋಗಿವೆ. ಕೋವಿಡ್ 19 ನಿಯಂತ್ರಣದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ತಪ್ಪು ನಿರ್ಧಾರ, ಅಕ್ರಮಗಳು, ಸಂಪುಟದಲ್ಲಿ ಹೊಂದಾಣಿಕೆ ಇಲ್ಲದ ಕಾರಣ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮವಾಗುತ್ತಿಲ್ಲ. ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ’ ಎಂದರು.

ಸುಗ್ರೀವಾಜ್ಞೆ ತುರ್ತು ಸಂದರ್ಭಗಳಲ್ಲಿ ಮಾತ್ರ ಬಳಸುವ ಅಸ್ತ್ರವಾಗಿದೆ. ಇತ್ತೀಚಿನ ದಿನಗಳ ಸುಗ್ರೀವಾಜ್ಞೆ ಮೂಲಕ ಪ್ರಮುಖ ಕಾಯ್ದೆಗಳಿಗೆ ತಿದ್ದುಪಡಿ ತರಲಾಗುತ್ತಿದೆ. ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾಗಿ, ಶಾಸನಸಭೆಯಲ್ಲಿ ಚರ್ಚೆಸದೇ ಈ ರೀತಿ ತಿದ್ದುಪಡಿ ತರುವುದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಸಂಚಾಗಿದೆ. ಕಾರ್ಮಿಕರ ಹಿತಾಸಕ್ತಿ ಪರಿಗಣಿಸದೇ, ಕಾರ್ಮಿಕ ಕಾನೂನಿಗೆ ತಿದ್ದುಪಡಿ ತರಲಾಗಿದೆ. ರಾಜ್ಯದ ಇತಿಹಾಸದಲ್ಲಿ ಯಾವುದೇ ಸರ್ಕಾರ ಇಂತಹ ಪ್ರಮಾದ ಮಾಡಿರಲಿಲ್ಲ ಎಂದು ಅವರು ಆರೋಪಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.