ಸಭೆಯಿಂದ ಹೊರನಡೆದ ಶಾಸಕ ಸೈಲ್
– ಪ್ರಜಾವಾಣಿ ಚಿತ್ರ
ಕಾರವಾರ: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ವಿಚಾರ ಚರ್ಚೆಗೆ ಅವಕಾಶ ನೀಡದ್ದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ವಿರುದ್ಧ ಸ್ವಪಕ್ಷೀಯ ಶಾಸಕ ಸತೀಶ ಸೈಲ್ ಅಸಮಾಧಾನ ವ್ಯಕ್ತಪಡಿಸಿ, ಕೆಡಿಪಿ ಸಭೆಯಿಂದ ಹೊರ ನಡೆದ ಘಟನೆ ಕಾರವಾರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆಯಿತು.
ಆರೋಗ್ಯ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ಬೀಡುವ ವೇಳೆ ಮಧ್ಯ ಪ್ರವೇಶಿಸಿದ ಶಾಸಕ ಸೈಲ್ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧದ ಕೊರತೆಗಳ ಬಗ್ಗೆ ಪತ್ರಿಕೆಗಳಲ್ಲಿ ಓದಿದ್ದೇನೆ. ಕಾರವಾರದಲ್ಲಿಯೂ ಸಮಸ್ಯೆ ಇದೆ. ಈ ಬಗ್ಗೆ ಮಾಹಿತಿ ನೀಡಬೇಕು ಎಂದರು.
ಇದಕ್ಕೆ ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ಔಷಧ ಕೊರತೆ ಸಮಸ್ಯೆ ಇಲ್ಲ ಎಂದು ಸಚಿವ ಮಂಕಾಳ ವೈದ್ಯ ಸಮರ್ಥನೆಗೆ ಮುಂದಾದರು. ಇದಕ್ಕೆ ಸಿಡಿಮಿಡಿಗೊಂಡ ಶಾಸಕ ಜನರು ಔಷಧ ಕೊರತೆ ಬಗ್ಗೆ ನನಗೆ ದೂರುತ್ತಿದ್ದಾರೆ. ವೈದ್ಯರೂ ಆಸ್ಪತ್ರೆಗಳಲ್ಲಿ ಇಲ್ಲ. ಸಮಸ್ಯೆ ಪರಿಹಾರ ಮಾಡುವುದನ್ನು ಬಿಟ್ಟು ಸಮಸ್ಯೆಯೆ ಇಲ್ಲ ಎಂದು ಸಮರ್ಥನೆಗೆ ಮುಂದಾಗಬೇಡಿ. ನಾನು ಹೆಬ್ಬೆಟ್ಟಿನ ವ್ಯಕ್ತಿ ಅಲ್ಲ ಎಂದು ಅಸಮಾಧಾನ ವ್ಯಕ್ತಪಡಿಸುತ್ತ ಹೊರನಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.