ಶಿರಸಿ– ಕುಮಟಾ ರಾಷ್ಟ್ರೀಯ ಹೆದ್ದಾರಿ (766ಇ) ನಿರ್ಮಾಣ ಕಾಮಗಾರಿಯನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿಕಾರಿಗಳ ಜತೆ ತೆರಳಿ ವೀಕ್ಷಿಸಿದರು
ಶಿರಸಿ: ಸಾಗರಮಾಲಾ ಯೋಜನೆಯಡಿಯ ಶಿರಸಿ– ಕುಮಟಾ ರಾಷ್ಟ್ರೀಯ ಹೆದ್ದಾರಿ (766ಇ) ನಿರ್ಮಾಣ ಕಾಮಗಾರಿಯನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿಕಾರಿಗಳ ಜತೆ ತೆರಳಿ ವೀಕ್ಷಿಸಿ, ನಿಗದಿತ ಸಮಯದೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದರು.
ಸಾಗರಮಾಲಾ ಯೋಜನೆಯಲ್ಲಿ ಕುಮಟಾ-ಶಿರಸಿ ರಸ್ತೆಯು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೇಗೇರಿದ್ದು, ಶೇ 75ಕ್ಕಿಂತ ಹೆಚ್ಚು ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ಸೇತುವೆ ನಿರ್ಮಾಣ ಕಾಮಗಾರಿ ಬಾಕಿ ಇರುವುದರಿಂದ ಡಿ.2 ರಿಂದ ಫೆ.25ರವರೆಗೆ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾಮಗಾರಿ ವೇಗವಾಗಿ ಮುಗಿಸುವಂತೆ ಸೂಚಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಬೆಣ್ಣೆಹೊಳೆ ಸೇತುವೆ ನಿರ್ಮಾಣ ಮತ್ತು ದೇವಿಮನೆ ಘಟ್ಟದ ಭಾಗದಲ್ಲಿ ಕಾಮಗಾರಿ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಅವರು, ಕುಮಟಾ ತಾಲ್ಲೂಕು ವ್ಯಾಪ್ತಿಯಲ್ಲಿ ಶೇ 40ರಷ್ಟು ರಸ್ತೆ ನಿರ್ಮಾಣ ಬಾಕಿ ಇದೆ. ವೇಗವಾಗಿ ಕಾಮಗಾರಿ ನಡೆಸಲು ಗುತ್ತಿಗೆದಾರರಿಗೆ ಆದೇಶ ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ನಿಗದಿತ ಸಮಯದಲ್ಲಿ ಕಾಮಗಾರಿ ಮುಕ್ತಾಯಗೊಳಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದರು.
ರಾಷ್ಟ್ರೀಯ ಹೆದ್ದಾರಿ ಯೋಜನಾಧಿಕಾರಿ ಶಿವಕಮಾರ್, ಆರ್.ಎನ್.ಎಸ್. ಇನ್ಫ್ರಾಸ್ಟ್ರಕ್ಚರ್ ಕಂಪನಿ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಇದ್ದರು.
ಶಿರಸಿ– ಕುಮಟಾ ರಾಷ್ಟ್ರೀಯ ಹೆದ್ದಾರಿ (766ಇ) ನಿರ್ಮಾಣ ಕಾಮಗಾರಿಯನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿಕಾರಿಗಳ ಜತೆ ತೆರಳಿ ವೀಕ್ಷಿಸಿ ನಿಗದಿತ ಸಮಯದೊಳಗಡೆ ಪೂರ್ಣಗೊಳಿಸುವಂತೆ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.