ಕಾರವಾರ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ಅಧಿಕಾರಕ್ಕಾಗಿ ನಡೆದಿರುವ ಮುಸುಕಿನ ಗುದ್ದಾಟದ ಪರಿಣಾಮದಿಂದ ಕಾಲ್ತುಳಿತದ ದುರಂತ ಸಂಭವಿಸಿದೆ’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.
‘ಕಾಂಗ್ರೆಸ್ ವರಿಷ್ಠರು, ಮುಖ್ಯಮಂತ್ರಿ ಅಧಿಕಾರ ಹಂಚಿಕೆ ಸೂತ್ರ ಪಾಲಿಸುವುದು ಒಳಿತು. ಇಲ್ಲದಿದ್ದರೆ, ಇಬ್ಬರ ಕಚ್ಚಾಟದಿಂದ ರಾಜ್ಯದ ಜನರಿಗೆ ಸಮಸ್ಯೆಯಾಗುತ್ತದೆ. ಆಡಳಿತದಲ್ಲಿ ಸಮನ್ವಯತೆ ಇಲ್ಲ ಮತ್ತು ದುರಾಡಳಿತ ಉತ್ತುಂಗ ತಲುಪಿದೆ’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.
ಇದಕ್ಕೂ ಮುನ್ನ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ರಾಜ್ಯದ ಕಾಂಗ್ರೆಸ್ ಸರ್ಕಾರ ಯಾವುದೇ ಕ್ಷಣ ಪತನವಾಗಬಹುದು. ಬಿಜೆಪಿ ಪುನಃ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.