
ಪ್ರಜಾವಾಣಿ ವಾರ್ತೆ
ಶಿರಸಿ: ತಾಲ್ಲೂಕಿನ ಮಧುರವಳ್ಳಿಯ ಶರ್ವಾಣಿ ಎಸ್. ಅವರು ಬೆಂಗಳೂರಿನ ದಯಾನಂದ ಸಾಗರ ವಿಶ್ವವಿದ್ಯಾಲಯಲ್ಲಿ ಎಂಟೆಕ್ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದಲ್ಲಿ ಎರಡನೇ ರ್ಯಾಂಕ್ ಗಳಿಸಿದ್ದಾರೆ.
ಇತ್ತೀಚೆಗೆ ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ವೈಸ್ ಛಾನ್ಸಲರ್ ಅವರಿಂದ ಸ್ನಾತಕೋತ್ತರ ಪದವಿ ಪ್ರಮಾಣ ಪತ್ರವನ್ನು ಸ್ವೀಕರಿಸಿದರು. ಇವರು ಇಲ್ಲಿನ ಸಾಮಾಜಿಕ ಕಾರ್ಯಕರ್ತ ಸತೀಶ ನಾಯ್ಕ ಹಾಗೂ ಉಪನ್ಯಾಸಕಿ ರತ್ನಮ್ಮ ಡಿ.ಸಿ. ಪುತ್ರಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.