ADVERTISEMENT

ಅಂಕೋಲಾ: ಬಹುಗ್ರಾಮ ಕುಡಿಯುವ ನೀರು ಯೋಜನೆ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 4 ಜೂನ್ 2025, 12:46 IST
Last Updated 4 ಜೂನ್ 2025, 12:46 IST
ಅಂಕೋಲಾ ತಾಲ್ಲೂಕಿನ ಹೊನ್ನಳ್ಳಿಯ ಗಂಗಾವಳಿ ನದಿಯಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಜಾಕ್ವೆಲ್ ಕಾಮಗಾರಿಯನ್ನು ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಭೇಟಿ ನೀಡಿ ಪರಿಶೀಲಿದರು.
ಅಂಕೋಲಾ ತಾಲ್ಲೂಕಿನ ಹೊನ್ನಳ್ಳಿಯ ಗಂಗಾವಳಿ ನದಿಯಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಜಾಕ್ವೆಲ್ ಕಾಮಗಾರಿಯನ್ನು ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಭೇಟಿ ನೀಡಿ ಪರಿಶೀಲಿದರು.   

ಅಂಕೋಲಾ: ತಾಲ್ಲೂಕಿನ 23 ಗ್ರಾಮಗಳಿಗೆ ವಾಸರೆ-ಕುದ್ರಿಗೆ ಬಹುಗ್ರಾಮ ಯೋಜನೆಯಡಿಯಲ್ಲಿ ಶಾಶ್ವತ ಕುಡಿಯುವ ನೀರು ಸರಬರಾಜು ಮಾಡುವ ಅಂದಾಜು ₹30 ಕೋಟಿ ರೂಪಾಯಿ ವೆಚ್ಚದ 25 ಕಿ.ಮೀ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದು, ಯೋಜನೆಯ ಜಲಮೂಲವಾದ ಹೊನ್ನಳ್ಳಿಯ ಗಂಗಾವಳಿ ನದಿಯಲ್ಲಿ ಜಾಕ್ವೆಲ್ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಬುಧವಾರ ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಭೇಟಿ ನೀಡಿ ಪರಿಶೀಲಿದರು.

ಇದೇ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಹಾಗೂ ಗುತ್ತಿಗೆ ಪಡೆದ ಕಂಪನಿಯವರಿಗೆ ಕಾಮಗಾರಿಯಲ್ಲಿ ಗುಣಮಟ್ಟ ಕಾದುಕೊಳ್ಳುವಂತೆ ಮತ್ತು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಇಒ ಸುನಿಲ್ ಎಂ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಕಲ್ಪನಾ ವಾಗಮೋರೆ, ಪಿಆರ್‌ಡಿ ಎಇಇ ರಾಮು ಗುನಗಿ, ಎಇ ರಾಘವೇಂದ್ರ ನಾಯ್ಕ, ಅಗಸೂರು ಗ್ರಾಮ ಪಂಚಾಯಿತಿ ಪಿಡಿಓ ಸರೋಜಿನಿ ನಾಯಕ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.