ADVERTISEMENT

ಮುಂಡಗೋಡ | ಗಾಂಜಾ ಸಾಗಾಟ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2025, 8:06 IST
Last Updated 11 ಆಗಸ್ಟ್ 2025, 8:06 IST
ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಮುಂಡಗೋಡ ಪೊಲೀಸರು ಬಂಧಿಸಿ, ಗಾಂಜಾ ಹಾಗೂ ಬೈಕ್‌ ವಶಪಡಿಸಿಕೊಂಡಿದ್ದಾರೆ
ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಮುಂಡಗೋಡ ಪೊಲೀಸರು ಬಂಧಿಸಿ, ಗಾಂಜಾ ಹಾಗೂ ಬೈಕ್‌ ವಶಪಡಿಸಿಕೊಂಡಿದ್ದಾರೆ   

ಮುಂಡಗೋಡ: ತಾಲ್ಲೂಕಿನ ಪಾಳಾ ಕ್ರಾಸ್ ಸನಿಹ ಬೈಕ್‌ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ, ಇಲ್ಲಿನ ಪೊಲೀಸರು ಶನಿವಾರ ದಾಳಿ ನಡೆಸಿ, ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ.

ಹಾನಗಲ್‌ ಪಟ್ಟಣದ ನವನಗರ ನಿವಾಸಿಗಳಾದ ಮುಜಾಫರ್ ಅಹ್ಮದ ಬ್ಯಾಡಗಿ ಹಾಗೂ ಪ್ರಶಾಂತ ಅಕ್ಕಿವಳಿ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿತರಿಂದ 900ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಬೈಕ್‌ ವಶಪಡಿಸಿಕೊಳ್ಳಲಾಗಿದೆ. ಹಾನಗಲ್‌ ಪಟ್ಟಣದ ಇಮ್ರಾನ್‌ ಬ್ಯಾಡಗಿ ಎಂಬಾತನಿಂದ ಅಕ್ರಮವಾಗಿ ಗಾಂಜಾ ಪಡೆದುಕೊಂಡು, ಹುಬ್ಬಳ್ಳಿ ಕಡೆ ಮಾರಾಟ ಮಾರಲು, ತಾಲ್ಲೂಕಿನ ಪಾಳಾ ಕ್ರಾಸ್‌ ಮಾರ್ಗವಾಗಿ ಬೈಕ್‌ ಮೇಲೆ ತೆರಳುತ್ತಿದ್ದಾಗ ದಾಳಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿ ಜಿ., ಹೆಚ್ಚುವರಿ ಎಸ್ಪಿ ಜಗದೀಶ ನಾಯ್ಕ, ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ ಮಾರ್ಗದರ್ಶನದಲ್ಲಿ ಸಿಪಿಐ ರಂಗನಾಥ ನೀಲಮ್ಮನವರ, ಪಿಎಸೈ ಪರಶುರಾಮ ಮಿರ್ಜಗಿ, ಸಿಬ್ಬಂದಿಗಳಾದ ಮಂಜಪ್ಪ ಚಿಂಚಲಿ, ಕೊಟೇಶ ನಾಗರವಳ್ಳಿ, ಅಣ್ಣಪ್ಪ ಬುಡಿಗೇರ, ಮಹಾಂತೇಶ ಮುಧೋಳ, ಬಸವರಾಜ ಒಡೆಯರ, ಮಂಜು‌ನಾಥ ಓಣಿಕೇರಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.