ಮುರುಡೇಶ್ವರ ಕಡಲತೀರ
ಭಟ್ಕಳ: ತಾಲ್ಲೂಕಿನ ಮುರುಡೇಶ್ವರದ ಸಮುದ್ರದಲ್ಲಿ ಮುಳುಗಿ ಕಣ್ಮರೆಯಾಗಿದ್ದ ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲ್ಲೂಕಿನ ಎಂ.ಕೊತ್ತೂರು ಗ್ರಾಮದ ಮೊರಾರ್ಜಿ ವಸತಿ ಶಾಲೆಯ ಮೂವರು ವಿದ್ಯಾರ್ಥಿಗಳಾದ ದೀಕ್ಷಾ ಜೆ(15), ಲಾವಣ್ಯ (15) ಹಾಗು ವಂದನಾ (15) ಮೃತದೇಹ ಬುಧವಾರ ಮುರುಡೇಶ್ವರದ ಸಮುದ್ರದಲ್ಲಿ ಪತ್ತೆಯಾಗಿದೆ.
ಕರಾವಳಿ ಕಾವಲು ಪೊಲೀಸ್ ಪಡೆ ಹಾಗೂ ಸ್ಥಳೀಯ ಮೀನುಗಾರರ ಸಹಾಯದಿಂದ ಬುಧವಾರ ಮುಂಜಾನೆಯಿಂದ ಮೃತದೇಹದ ಪತ್ತೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಬೆಳಿಗ್ಗೆ 11.30ಕ್ಕೆ ಇಬ್ಬರು ವಿದ್ಯಾರ್ಥಿನಿಯರ ಮೃತದೇಹ ಆರದ.ಎನ್.ಎಸ್ ರೆಸಿಡೆನ್ಸಿ ಹಿಂಬದಿ ಕಲ್ಲುಬಂಡೆ ಸಮೀಪ ಪತ್ತೆಯಾದರೆ, ಇನ್ನೋರ್ವ ವಿದ್ಯಾರ್ಥಿನಿ ಮೃತದೇಹ ಪಕ್ಕದ ಗುಡ್ಡದ ಕೆಳಗಡೆ ಪತ್ತೆಯಾಗಿದೆ.
ಕರಾವಳಿ ಪೊಲೀಸ್ ಕಾವಲು ಪಡೆ ಸಿಪಿಐ ಕುಸುಮಧರಾ ಅವರ ನೇತ್ರತ್ವದಲ್ಲಿ ಪತ್ತೆ ಕಾರ್ಯ ನಡೆಸಲಾಗಿತ್ತು. ಮಂಗಳವಾರ ಸಂಜೆ ಶ್ರಾವಂತಿ ಗೋಪಾಲಪ್ಪ (15) ಸಾವನಪ್ಪಿದ್ದಳು.
ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ, ಉಪವಿಭಾಗಾಧಿಕಾರಿ ಡಾ.ನಯನಾ ಸ್ಥಳದಲ್ಲಿಯೇ ಇದ್ದು ಮೃತದೇಹ ಪತ್ತೆ ಕಾರ್ಯಚರಣೆಗೆ ಮಾರ್ಗದರ್ಶನ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.