ಸಾವು (ಪ್ರಾತಿನಿಧಿಕ ಚಿತ್ರ)
ಭಟ್ಕಳ: ತಾಲ್ಲೂಕಿನ ಮುರುಡೇಶ್ವರದ ಕಡಲತೀರದಲ್ಲಿ ಸೋಮವಾರ ಬೆಂಗಳೂರಿನ ಬಿದರಹಳ್ಳಿ ನಿವಾಸಿ ಕೃತಿಕ್ ಕೆ.ರವಿ ರೆಡ್ಡಿ (8) ಎಂಬ ಬಾಲಕ ಅಲೆಗಳ ಹೊಡೆತಕ್ಕೆ ಸಿಲುಕಿ ನೀರಿನಲ್ಲಿ ಮುಳುಗಿ, ಮೃತಪಟ್ಟಿದ್ದಾನೆ. ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವಸಂತಾ ಕೆ. (27) ಎಂಬುವರನ್ನು ಇದೇ ಸಂದರ್ಭದಲ್ಲಿ ರಕ್ಷಿಸಲಾಗಿದೆ.
‘ಬೆಂಗಳೂರಿನ ಬಿದರಹಳ್ಳಿಯ ನಿವಾಸಿ ಕೆ.ರವಿ ರೆಡ್ಡಿ ಭಾನುವಾರ ಕುಟುಂಬ ಸಮೇತ ಮುರುಡೇಶ್ವರಕ್ಕೆ ಬಂದಿದ್ದರು. ಕಡಲತೀರದಲ್ಲಿ ಆಟವಾಡಲು ತೆರಳಿದ್ದ ವೇಳೆ ದುರ್ಘಟನೆ ಜರುಗಿದೆ’ ಎಂದು ಮುರುಡೇಶ್ವರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.