ADVERTISEMENT

ಭಟ್ಕಳ | ವಿಜೃಂಭಣೆಯಿಂದ ನಡದ ಮುರ್ಡೇಶ್ವರ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 21 ಜನವರಿ 2026, 6:15 IST
Last Updated 21 ಜನವರಿ 2026, 6:15 IST
ಭಟ್ಕಳ ತಾಲ್ಲೂಕಿನ ಮುರ್ಡೇಶ್ವರ ಗ್ರಾಮದಲ್ಲಿ ಮತ್ಹೋಬಾರ ಮುರುಡೇಶ್ವರ ಸ್ವಾಮಿ ಮಹಾರಥೋತ್ಸವ ಸಾವಿರಾರು ಭಕ್ತರ ಸಡಗರದ ಮಧ್ಯೆ ಸಂಭ್ರಮದಿಂದ ನಡೆಯಿತು
ಭಟ್ಕಳ ತಾಲ್ಲೂಕಿನ ಮುರ್ಡೇಶ್ವರ ಗ್ರಾಮದಲ್ಲಿ ಮತ್ಹೋಬಾರ ಮುರುಡೇಶ್ವರ ಸ್ವಾಮಿ ಮಹಾರಥೋತ್ಸವ ಸಾವಿರಾರು ಭಕ್ತರ ಸಡಗರದ ಮಧ್ಯೆ ಸಂಭ್ರಮದಿಂದ ನಡೆಯಿತು   

ಭಟ್ಕಳ: ತಾಲ್ಲೂಕಿನ ಪ್ರಸಿದ್ದ ಪ್ರವಾಸಿ ತಾಣವಾದ ಮುರ್ಡೇಶ್ವರದ ಮಾತ್ಹೋಬಾರ ಮುರ್ಡೇಶ್ವರ ದೇವರ ರಥೋತ್ಸವ ಸಾವಿರಾರು ಭಕ್ತರ ಹರ್ಷೋದ್ಗಾರಗಳ ನಡುವೆ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.

ಜ.15ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿ ಜ19ರಂದು ಮಹಾರಥೋತ್ಸವ ಜರುಗಿತು.

ಮಹಾರಥೋತ್ಸವದ ಅಂಗವಾಗಿ ಬೆಳಿಗ್ಗೆಯಿಂದಲೇ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹೋಮ ಹವನ ವಿಧಿವತ್ತಾಗಿ ನಡೆಸಲಾಯಿತು. ಮಧ್ಯಾಹ್ನದಿಂದ ಸಾವಿರಾರು ಭಕ್ತರು ರಥಕಾಣಿಕೆ ನೀಡಿ ಪೂಜೆ ಪುನಸ್ಕಾರ ನೆರವೇರಿಸಿ ರಥೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ADVERTISEMENT

ಸಂಜೆ 5.30ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಮಾಹಾರಥವನ್ನು ದೇವಸ್ಥಾನದ ಕೆರೆಯ ಸುತ್ತ ಭಕ್ತರ ಜಯಘೋಷದೊಂದಿಗೆ ಎಳೆಯಲಾಯಿತು.

ರಥೋತ್ಸವದ ಸಂದರ್ಭದಲ್ಲಿ ಸೂಮಾರು 20ಸಾವಿರಕ್ಕೂ ಭಕ್ತರು ಪಾಲ್ಗೊಂಡಿದ್ದರು ಎನ್ನಲಾಗಿದೆ. ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಮಾಜಿ ಶಾಸಕ ಸುನೀಲ ನಾಯ್ಕ, ಉದ್ಯಮಿ ಈಶ್ವರ ನಾಯ್ಕ, ದೇವಸ್ಥಾನದ ಟ್ರಸ್ಟಿಗಳು, ಉಪವಿಭಾಗಾಧಿಕಾರಿ, ತಹಶೀಲ್ದಾರ್ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಿದ್ದರು.

ದೂರದಿಂದ ಬಂದಿದ್ದ ಸಾವಿರಾರು ಭಕ್ತರ ರಕ್ಷಣೆಗೆ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿತ್ತು. ಸುಗಮ ಸಂಚಾರಕ್ಕಾಗಿ ಪೇ ಎಂಡ್‌ ಪಾರ್ಕ್‌ ಎಲ್ಲೆಡೆ ನಿರ್ಮಾಣ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.