ADVERTISEMENT

ಮುರುಡೇಶ್ವರದಲ್ಲಿ ‘ವಸ್ತ್ರ ಸಂಹಿತೆ’ ಜಾರಿ

​ಪ್ರಜಾವಾಣಿ ವಾರ್ತೆ
Published 22 ಜೂನ್ 2025, 15:35 IST
Last Updated 22 ಜೂನ್ 2025, 15:35 IST
<div class="paragraphs"><p>ಮುರುಡೇಶ್ವರ ಪ್ರವಾಸಿ ತಾಣದ ದೃಶ್ಯ</p></div>

ಮುರುಡೇಶ್ವರ ಪ್ರವಾಸಿ ತಾಣದ ದೃಶ್ಯ

   

ಭಟ್ಕಳ: ‘ಮುರುಡೇಶ್ವರದ ಶಿವ ದೇವಸ್ಥಾನದ ದರ್ಶನಕ್ಕೆ ಬರುವ ಭಕ್ತರು ವಸ್ತ್ರ ಸಂಹಿತೆ ನಿಯಮ ಪಾಲಿಸಬೇಕು’ ಎಂದು ದೇವಸ್ಥಾನದ ವತಿಯಿಂದ ಭಾನುವಾರ ಸೂಚನೆ ಹೊರಡಿಸಲಾಗಿದೆ. 

ಈ ಕುರಿತು, ಭಕ್ತರು ವಸ್ತ್ರಸಂಹಿತೆ ಪಾಲಿಸುವಂತೆ ವಿನಂತಿಸಿ ಸಾರ್ವಜನಿಕರ ಗಮನಕ್ಕೆ ಬರುವಂತೆ ಬ್ಯಾನರ್ ಹಾಕಲಾಗಿದೆ. ಪುರುಷರು–ಅಂಗಿ ಧೋತಿ, ಪ್ಯಾಂಟ್ ಮತ್ತು ಕುರ್ತಾ ಪೈಜಾಮ, ಮಹಿಳೆಯರು–ಸೀರೆ, ಚೂಡಿದಾರ ಧರಿಸಿ ದೇವರ ದರ್ಶನ ಮಾಡಬಹುದೆಂದು ತಿಳಿಸಲಾಗಿದೆ.

ADVERTISEMENT

ಈ ಕುರಿತು ಪ್ರತಿಕ್ರಿಯಿಸಿದ ದೇವಸ್ಥಾನದ ವ್ಯವಸ್ಥಾಪಕ ಮಂಜುನಾಥ ಶೆಟ್ಟಿ , ‘ಮುರುಡೇಶ್ವರನ ಸನ್ನಿಧಿಯಲ್ಲಿ ಪಾವಿತ್ರ್ಯ ಕಾಪಾಡುವ ಉದ್ದೇಶದಿಂದ ದೇವರ ದರ್ಶನ ಮಾಡುವ ಭಕ್ತಾಧಿಗಳಿಗೆ ವಸ್ತ್ರಸಂಹಿತೆ ನಿಯಮ ಪಾಲಿಸುವಂತೆ ವಿನಂತಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಭಕ್ತರ ಸ್ಪಂದನೆ ನೋಡಿ ಈ ನಿಯಮವನ್ನು ಕಡ್ಡಾಯಗೊಳಿಸಲಾವುದು’ ಎಂದರು.

ದೇವಸ್ಥಾನದ ಪಾವಿತ್ರ್ಯ ಕಾಪಾಡುವ ಉದ್ದೇಶದಿಂದ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವಂತೆ ಆಗ್ರಹಿಸಿ 2022ರ ಡಿಸೆಂಬರ್ ನಲ್ಲಿ ಸನಾತನ ಹಿಂದೂ ಜನಜಾಗೃತಿ ಸಮಿತಿ ಸ್ಥಳೀಯ ಘಟಕ ಮತ್ತು ವಿವಿಧ ಹಿಂದೂ ಪರ ಸಂಘಟನೆ ವತಿಯಿಂದ ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.