
ಪ್ರಜಾವಾಣಿ ವಾರ್ತೆ
ಭಟ್ಕಳ: ಮುರುಡೇಶ್ವರದ ಆರ್.ಎನ್.ಎಸ್. ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ರಾಮ ನಗರದಲ್ಲಿ ನಡೆದ ಸಿ.ಬಿ.ಎಸ್.ಇ. ಶಾಲೆಗಳ ವಾರ್ಷಿಕ ಕ್ರೀಡಾ ಕೂಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಜಿಲ್ಲೆಯ ಸುಮಾರು 11 ಸಿ.ಬಿ.ಎಸ್.ಇ. ಶಾಲೆಗಳ ವಿದ್ಯಾರ್ಥಿಗಳು ಕ್ರೀಡಾ ಕೂಟದಲ್ಲಿ ಭಾಗವಹಿಸಿದ್ದು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಮುರುಡೇಶ್ವರದ ಆರ್.ಎನ್.ಎಸ್. ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು 10 ಪದಕಗಳನ್ನು ತಮ್ಮದಾಗಿಸಿಕೊಂಡು ಉತ್ತಮ ಸಾಧನೆ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.