ADVERTISEMENT

ಹಿಜಾಬ್ ತೀರ್ಪು: ಭಟ್ಕಳದಲ್ಲಿ ಅಂಗಡಿ ಮುಂಗಟ್ಟು ಮುಚ್ಚಿದ ಮುಸ್ಲಿಂ ವರ್ತಕರು

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2022, 11:38 IST
Last Updated 15 ಮಾರ್ಚ್ 2022, 11:38 IST
ಹಿಜಾಬ್ ತೀರ್ಪು: ಭಟ್ಕಳದಲ್ಲಿ ಅಂಗಡಿ ಮುಂಗಟ್ಟು ಮುಚ್ಚಿದ ಮುಸ್ಲಿಂ ವರ್ತಕರು
ಹಿಜಾಬ್ ತೀರ್ಪು: ಭಟ್ಕಳದಲ್ಲಿ ಅಂಗಡಿ ಮುಂಗಟ್ಟು ಮುಚ್ಚಿದ ಮುಸ್ಲಿಂ ವರ್ತಕರು   

ಭಟ್ಕಳ: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧಾರಣೆಗೆ ನಿರ್ಬಂಧ ವಿಧಿಸಿ ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದ ಬಳಿಕ ಪಟ್ಟಣದಲ್ಲಿ ಮುಸ್ಲಿಂ ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತರಾಗಿ ಮುಚ್ಚಿದರು.

ಹಿಜಾಬ್ ಧಾರಣೆ ಬಗ್ಗೆ ಪಟ್ಟಣದಲ್ಲಿ ಯಾವುದೇ ಶಾಲೆ ಅಥವಾ ಕಾಲೇಜಿನಲ್ಲಿ, ಅಹಿತಕರ ಘಟನೆ ನಡೆದಿಲ್ಲ. ಆದರೂ ಹಿಜಾಬ್ ಮುಸ್ಲಿಮರ ಮೂಲಭೂತ ಹಕ್ಕು. ಅದಕ್ಕೆ ಅವಕಾಶ ನೀಡುವಂತೆ ತಂಝೀಂ ಸೇರಿದಂತೆ ಹಲವು ಮುಸ್ಲಿಂ ಸಂಘಟನೆಗಳು ಮನವಿ ಸಲ್ಲಿಸಿದ್ದವು. ಒಂದೊಮ್ಮೆ ಹೈಕೋರ್ಟ್‌ನಲ್ಲಿ ತೀರ್ಪು ತಮ್ಮ ವಿರುದ್ಧ ಬಂದರೆ ತಮ್ಮ ಹಕ್ಕಿಗಾಗಿ ಹೋರಾಟ ನಡೆಸುವುದಾಗಿ ತಿಳಿಸಿದ್ದರು.

ಮಂಗಳವಾರ ಬೆಳಿಗ್ಗೆ ತೀರ್ಪು ಪ್ರಕಟಗೊಂಡ ಬೆನ್ನಲ್ಲೇ ಮುಸ್ಲಿಮರು ಮಧ್ಯಾಹ್ನ ತಮ್ಮ ಅಂಗಡಿ ಮುಂಗಟ್ಟುಗಳ ಬಾಗಿಲು ಮುಚ್ಚಿ ಅಸಮಾಧಾನ ವ್ಯಕ್ತಪಡಿಸಿದರು. ಪಟ್ಟಣದ ಬರ್ಮಾ ಬಝಾರ್, ಮುಖ್ಯ ರಸ್ತೆಯಲ್ಲಿರುವ ಮಳಿಗೆಗಳ ಬಾಗಿಲು ಮುಚ್ಚಿದ ಕಾರಣ ತಿಳಿಯದೇ ಜನ ಗೊಂದಲಕ್ಕೀಡಾದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.