ADVERTISEMENT

ಮೂರುಪಟ್ಟು ಸಾಲ ಮಾಡಿದ್ದೇ ಮೋದಿ ಸಾಧನೆ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 26 ಮೇ 2022, 13:21 IST
Last Updated 26 ಮೇ 2022, 13:21 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಶಿರಸಿ: ಅಧಿಕಾರಕ್ಕೆ ಬಂದ ಎಂಟು ವರ್ಷಗಳಲ್ಲಿ ದೇಶದ ಸಾಲವನ್ನು ಮೂರುಪಟ್ಟು ಹೆಚ್ಚಳ ಮಾಡಿದ್ದೇ ಪ್ರಧಾನಿ ನರೇಂದ್ರ ಮೋದಿ ಸಾಧನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.

ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮೋದಿ ಅಧಿಕಾರಕ್ಕೆ ಬರುವ ಮುನ್ನ ದೇಶದ ಸಾಲ ₹53 ಲಕ್ಷ ಕೋಟಿಯಷ್ಟಿತ್ತು. ಈಗ ಅದು ₹155 ಲಕ್ಷ ಕೋಟಿಗೆ ತಲುಪಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪ್ರತಿ ವರ್ಷ ₹70 ಸಾವಿರ ಕೋಟಿ ಸಾಲ ಮಾಡುತ್ತಿದೆ. ಇದು ಜನರ ಮೇಲೆ ಆರ್ಥಿಕ ಹೊರೆಯಾಗಲು ಕಾರಣವಾಗಿದೆ’ ಎಂದರು.

‘ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಭಾಗಿಯಾದ ಮಾತ್ರಕ್ಕೆ ಬಂಡವಾಳ ಹರಿದು ಬರುವುದಿಲ್ಲ. ಶಾಂತಿ, ಸುವ್ಯವಸ್ಥೆ ನೆಲೆಸಿದ್ದರೆ ಮಾತ್ರ ಹೂಡಿಕೆದಾರರನ್ನು ಆಕರ್ಷಿಸಬಹುದು. ಈ ನಿಟ್ಟಿನಲ್ಲಿ ಸರ್ಕಾರ ಗಂಭೀರವಾಗಿ ಗಮನ ಹರಿಸಬೇಕು. ಕೋಮು ದ್ವೇಷ ಹರಡುವವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು’ ಎಂದರು.

ADVERTISEMENT

‘ಜೆಡಿಎಸ್ ಜತೆಗಿನ ಮೈತ್ರಿ ಮುಗಿದ ಅಧ್ಯಾಯವಾಗಿದೆ. ಇನ್ನು ಮುಂದೆ ಜೆಡಿಎಸ್ ಜತೆ ಯಾವುದೇ ಸ್ನೇಹ ಇಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.