ADVERTISEMENT

ನೇತ್ರಾವತಿ ಆತ್ಮಹತ್ಯೆ ಪ್ರಕರಣ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2019, 13:08 IST
Last Updated 17 ಅಕ್ಟೋಬರ್ 2019, 13:08 IST
ಬಂಧಿತ ಆರೋಪಿ ವಿಮಲಾ ನಾಯ್ಕ
ಬಂಧಿತ ಆರೋಪಿ ವಿಮಲಾ ನಾಯ್ಕ   

ಹೊನ್ನಾವರ: ತಾಲ್ಲೂಕಿನ ಕಾಸರಕೋಡಿನಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿದ್ದ ನೇತ್ರಾವತಿ ಅಂಬಿಗ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ವಿಮಲಾ ನಾಯ್ಕ ಅವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.ಅವರು ಅದೇಗ್ರಾಮದ ಪಂಚಾಯ್ತಿ ಸದಸ್ಯೆಯಾಗಿದ್ದಾರೆ.

ವಿಮಲಾ ನಾಯ್ಕ ಬಡ್ಡಿ ಹಣ ಕೊಡುವಂತೆ ಪೀಡಿಸಿದ್ದರಿಂದ ನೇತ್ರಾವತಿ ಆತ್ಮಹತ್ಯೆ ಮಾಡಿಕೊಂಡರು ಎಂದು ದೂರು ದಾಖಲಾಗಿತ್ತು. ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಎರಡು ಬಾರಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು.

ಪ್ರಕರಣದ ಎರಡನೇ ಆರೋಪಿ ಮಂಗಲಾ ನಾಯ್ಕ ಎನ್ನುವವರನ್ನು ಈ ಮೊದಲೇ ಬಂಧಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.