ADVERTISEMENT

ವೈದ್ಯರ ಕೊರತೆ ನೀಗಿಸಲು ಪ್ರಯತ್ನ

ಜೊಯಿಡಾ: ಮೇಲ್ದರ್ಜೆಗೇರಿಸಿದ ತಾಲ್ಲೂಕು ಆಸ್ಪತ್ರೆ ಉದ್ಘಾಟಿಸಿದ ಸಚಿವ ದೇಶಪಾಂಡೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2019, 13:50 IST
Last Updated 6 ಜುಲೈ 2019, 13:50 IST
ಜೊಯಿಡಾ ತಾಲ್ಲೂಕು ಆಸ್ಪತ್ರೆಯ ನೂತನ ಕಟ್ಟಡವನ್ನು ಶನಿವಾರ ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಮಾತನಾಡಿದರು
ಜೊಯಿಡಾ ತಾಲ್ಲೂಕು ಆಸ್ಪತ್ರೆಯ ನೂತನ ಕಟ್ಟಡವನ್ನು ಶನಿವಾರ ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಮಾತನಾಡಿದರು   

ಜೊಯಿಡಾ: ‘ವೈದ್ಯರ ಕೊರತೆ ರಾಜ್ಯದಾದ್ಯಂತ ಇದೆ. ಅದನ್ನು ಆದಷ್ಟು ಬೇಗ ನೀಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ.ಜಿಲ್ಲೆಯ ಎಲ್ಲ ಆಸ್ಪತ್ರೆಗಳನ್ನು ಸೂಕ್ತ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.

ಇಲ್ಲಿ30ರಿಂದ 100 ಹಾಸಿಗೆಗಳಿಗೆ ₹ 6 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಿದ ತಾಲ್ಲೂಕು ಆಸ್ಪತ್ರೆ ಕಟ್ಟಡವನ್ನು ಹಾಗೂ ₹ 1.50 ಕೋಟಿ ಅನುದಾನದಲ್ಲಿ ನವೀಕರಿಸಲಾದಬಸ್ ನಿಲ್ದಾಣವನ್ನು ಶನಿವಾರಉದ್ಘಾಟಿಸಿದರು. ಇದೇವೇಳೆ ಕೃಷಿ ಅಭಿಯಾನ ರಥಕ್ಕೂ ಚಾಲನೆ ನೀಡಿದರು.

‘ತಾಲ್ಲೂಕಿನಲ್ಲಿ ಶಿಕ್ಷಣ ಮತ್ತು ಆರೋಗ್ಯ ಸೇವೆಗಳು ಎಲ್ಲರಿಗೂ ಸುಲಭವಾಗಿ ಸಿಗುವಂತೆ ಆಗಬೇಕು. ಈ ಆಸ್ಪತ್ರೆಗೆ ಅಗತ್ಯವಿರುವ ವೈದ್ಯರನ್ನು ನಿಯೋಜಿಸಲು ಕ್ರಮ ವಹಿಸಲಾಗುವುದು’ ಎಂದು ಭರವಸೆ ನೀಡಿದರು.

ADVERTISEMENT

‘ವಿವಿಧ ಕಾಮಗಾರಿಗಳು ಯಾವ ರೀತಿ ಆಗುತ್ತಿವೆಎಂಬುದನ್ನು ಸ್ಥಳಿಯರೇ ನೋಡಿ, ಕಳಪೆ ಎಂದು ಕಂಡುಬಂದರೆ ಕಾಮಗಾರಿ ನಿಲ್ಲಿಸಿ. ಕೆಲವು ಕಟ್ಟಡಗಳು ಮತ್ತು ಕಾಮಗಾರಿ ಕಳಪೆಯಾಗಿರುವ ಬಗ್ಗೆ ನನಗೆ ಮಾಹಿತಿ ದೊರೆತಿದೆ.ಜನರು ಅಂತಹ ಗುತ್ತಿಗೆದಾರರ ಮಾಹಿತಿಯನ್ನು ಜನಪ್ರತಿನಿಧಿಗಳ ಗಮನಕ್ಕೆ ತರಬೇಕು’ ಎಂದರು.

‘ಯಾರು ರಾಜೀನಾಮೆ ಕೊಟ್ಟರೆಂದು ತಿಳಿದಿಲ್ಲ’:ರಾಜ್ಯದ ಕಾಂಗ್ರೆಸ್ ಮತ್ತು ಜೆಡಿಎಸ್ ರಾಜೀನಾಮೆ ನೀಡುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ದೇಶಪಾಂಡೆ, ‘ರಾಜೀನಾಮೆ ಯಾರು ಕೊಟ್ಟರು,ಯಾಕಾಗಿ ಕೊಟ್ಟಿದ್ದಾರೆ ಎಂದುನನಗೆ ಗೊತ್ತಿಲ್ಲ. ಅನವಶ್ಯಕವಾಗಿ ಊಹಾಪೋಹಗಳ ಬಗ್ಗೆ ಮಾತನಾಡುವುದು ಸರಿ ಅಲ್ಲ. ನಾನು, ನನ್ನ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯಲ್ಲಿ ನಿರತನಾಗಿದ್ದೇನೆ. ಬೇಂಗಳೂರಿನಿಂದ ದೂರ ಇರುವ ಕಾರಣ ಅಲ್ಲಿನ ವಿಷಯ ಗೊತ್ತಿಲ್ಲ’ ಎಂದರು.

ಜಿಲ್ಲಾ ಪಂಚಾಯ್ತಿ ಉಪಾದ್ಯಕ್ಷ ಸಂತೋಷ ರೇಣಕೆ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ರಮೇಶ ನಾಯ್ಕ, ಸಂಜಯ ಹಣಬರ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ನರ್ಮದಾಪಾಟ್ನೇಕರ, ಉಪ ವಿಭಾಗಾಧಿಕಾರಿ ಅಭಿಜಿನ್, ಉಪಾದ್ಯಕ್ಷ ವಿಜಯ ಪಂಡಿತ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಶೈಲಾ ನಾಯ್ಕ, ತಾಲ್ಲೂಕು ಪಂಚಾಯ್ತಿಸದಸ್ಯೆ ಅಲ್ಕಂಜಾ ಮಂಥೇರೋ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಅಶೋಕ ಕುಮಾರ್, ತಹಶೀಲ್ದಾರ ಸಂಜಯ ಕಾಂಬಳೆ, ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿಪ್ರಕಾಶ ಹಾಲಮ್ಮನವರ, ತಾಲ್ಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ.ವಿಜಯಕುಮಾರ್, ಡಾ.ಸಂಗಪ್ಪ ಗಾಬಿಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.