ADVERTISEMENT

ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಅವಕಾಶ

​ಪ್ರಜಾವಾಣಿ ವಾರ್ತೆ
Published 8 ಜೂನ್ 2023, 13:04 IST
Last Updated 8 ಜೂನ್ 2023, 13:04 IST

ಕಾರವಾರ: ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳು ಜೂನ್ 12ರಿಂದ 19ರ ವರೆಗೆ ನಡೆಯಲಿದ್ದು ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳು ನಿರ್ವಾಹಕರಿಗೆ ಬಸ್ ಪಾಸ್ ಅಥವಾ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ, ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಹಾಗೂ ಹಿಂದಿರುಗಿ ಬರಲು ಉಚಿತ ಪ್ರಯಾಣ ಮಾಡಬಹುದಾಗಿದೆ ಎಂದು ವಾ.ಕ.ರ.ಸಾ.ಸಂಸ್ಥೆಯು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT